ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ : ಸರ್ಕಾರಕ್ಕೆ ಪ್ರತಾಪ್ ಸಿಂಹ ಮನವಿ -Vishwanews24
ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ : ಸರ್ಕಾರಕ್ಕೆ ಪ್ರತಾಪ್ ಸಿಂಹ ಮನವಿ -Vishwanews24
ಮೈಸೂರು: ಕೊರೊನಾ ಹಿನ್ನೆಲೆ ಕಳೆದ ಮಾರ್ಚ್ನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೆ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತಿರಾ.? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ನಾನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೇ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕೊರೊನಾ ಹಿನ್ನೆಲೆ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.
