Featured

ಮಾ.13ರಂದು “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನೆ ಹಾಗೂ ಯಕ್ಷಗಾನ ಪ್ರದರ್ಶನ -Vishwanews24

ಮಾ.13ರಂದು “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನೆ ಹಾಗೂ ಯಕ್ಷಗಾನ ಪ್ರದರ್ಶನ -Vishwanews24

ಕಾಪು : ಕೊರೊನಾ ಮಹಾಮಾರಿಯಿಂದ ತೊಂದರೆಗೊಳಗಾದ ಯಕ್ಷಗಾನ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಕಾಪುವಿನ ಕಲಾಪ್ರೇಮಿಗಳು ಹುಟ್ಟುಹಾಕಿರುವ ಸಂಘಟನೆ “ಯಕ್ಷ ಪ್ರೀಯರು” ಕಾಪು ಇದರ ಉದ್ಘಾಟನಾ ಸಮಾರಂಭ ಹಾಗೂ ಯಕ್ಷಗಾನ ಪ್ರದರ್ಶನ ಮಾ. 13ರಂದು ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಲಿದೆ ಎಂದು ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ತಿಳಿಸಿದ್ದಾರೆ.

ಅವರು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನೂತನ ಸಂಘಟನೆ ಅವಿರತ ಕೆಲಸ ಮಾಡಲಿದೆ. ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕಲಾವಿದರಿಗೆ ಸನ್ಮಾನ, ಅಶಕ್ತ ಹಾಗೂ ಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವ ಯೋಜನೆಯಿದ್ದು ಪ್ರತೀ ವರ್ಷ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಈ ಬಾರಿ ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿ ಇವರ “ಕಾರಣಿಕದ ಕೊರಗಜ್ಜ” ಯಕ್ಷಗಾನ ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಅರುಣ್ ಶೆಟ್ಟಿ ಪಾದೂರು, ಸಂತೋಷ್ ಆರ್ ಶೆಟ್ಟಿ, ಪುರುಷೋತ್ತಮ ಸಾಲಿಯಾನ್, ಪ್ರಭಾತ್ ಕುಮಾರ್ ಶೆಟ್ಟಿ, ರಘುನಾಥ ಶೆಟ್ಟಿ, ಉಮೇಶ್ ಮಲ್ಲಾರ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

51 minutes ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

11 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

11 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

11 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

11 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

11 hours ago