Featured

ಮಾ. 21ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ – vishwanews24

ಮಾ. 21ರವರೆಗೆ ಕರಾವಳಿಯಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆ ಸಾಧ್ಯತೆ : 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ ಸುಮಾರು 25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯ ತೀವ್ರತೆ ಮುಂದುವರಿಯಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ನಿರ್ಮಾಣವಾದ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಹಲವೆಡೆ ಈಗಾಗಲೇ ಅಕಸ್ಮಾತ್ ಮಳೆ ದಾಖಲಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲವೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

ಮಲೆನಾಡು, ಕರಾವಳಿ ಹಾಗೂ ಒಳನಾಡಿನ ಅನೇಕ ಭಾಗಗಳಲ್ಲಿ ಮಾರ್ಚ್ 21ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಇತ್ತ ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ವೇಳೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಗಾಳಿಯ ಪ್ರಭಾವ ಹೆಚ್ಚಿದರೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

5 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

7 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

8 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

8 hours ago