ಮಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಶನಿವಾರ (ಮಾ.22) ದಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ.
ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ ಸಾಮಾನ್ಯ ದಿನಗಳಂತೆ ಬಸ್ ಗಳು ಓಡಾಡಲಿವೆ. ಸಾವರ್ಜನಿಕರ ಹಿತದೃಷ್ಟಿ, ಮುಖ್ಯವಾಗಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಸ್ ಬಂದ್ ಮಾಡುವುದಿಲ್ಲ ಎಂದು ದ.ಕ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಜ್ ಪರ್ತಿಪಾಡಿ ತಿಳಿಸಿದ್ದಾರೆ.
ಬಸ್ ಬಂದ್ ಗೆ ಯಾವುದೇ ಸಂಘಟನೆಗಳು ನಮ್ಮನ್ನು ಕೇಳಿಕೊಂಡಿಲ್ಲ. ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಾರಣದಿಂದ ಬಂದ್ ಮಾಡುವುದು ಕೂಡ ಇಲ್ಲ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ʼಉದಯವಾಣಿʼಗೆ ಪ್ರತಿಕ್ರಿಯಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…