ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಗೆ ಕಡಿವಾಣ ಹಾಕಲು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಸಂಘಟನೆಗಳ ಸಭೆ ಸೇರಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ ಮಾ.22 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಯಲಿದೆ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಮಾ.3 ರಂದು ಬೆಳಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ ಹಾಕಲಿದ್ದೇವೆ. ಮಾ.7ಕ್ಕೆ ಬೆಳಗಾವಿ ಚಲೋ ಕೈಗೊಳ್ಳುತ್ತೇವೆ. ಮಾ.11 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಮಾ.14 ರಂದು ಮೈಸೂರು, ಮಂಡ್ಯ, ರಾಮನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸೇರಿದಂತೆ ಇಡೀ ಬೆಳಗಾವಿಯ ಎಲ್ಲಾ ಅಧಿಕಾರಿಗಳ ಬದಲಾವಣೆ ಆಗಬೇಕು. ಎಲ್ಲಾ ಕನ್ನಡ ಅಧಿಕಾರಿಗಳನ್ನ ಹಾಕಬೇಕು. ಎಂಇಎಸ್ ನಿಷೇಧ ಮಾಡಿ ಶಿವಸೇನೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸಾಂಬಾಜಿ ಪ್ರತಿಮೆ ತೆರವು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…