Featured

ಮಾ. 25 – ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನದ ಜೀರ್ಣೋದ್ಧಾರ ಮಹಾ ಸಂಕಲ್ಪ ; ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ – vishwanews24

ಮಾ. 25 – ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಜೀರ್ಣೋದ್ಧಾರ ಮಹಾ ಸಂಕಲ್ಪ ; ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ

 ಕಾಪು: ಮಾರ್ಚ್ 25 ಮಂಗಳವಾರ ಸುಗ್ಗಿ ಜಾತ್ರೆಯ ಪರ್ವಕಾಲದಂದು “ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಜೀರ್ಣೋದ್ಧಾರ ಮಹಾ ಸಂಕಲ್ಪ” ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾತ್ರಿ 9.30 ಗಂಟೆಗೆ ಶ್ರೀ ದೇವಳದ ಮುಂಭಾಗದ ವೇದಿಕೆಯಲ್ಲಿ “ಜೀರ್ಣೋದ್ದಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನ ಪ್ರಾರಂಭ ಸಂಬಂಧಿ “ಸಭಾ ಕಾರ್ಯಕ್ರಮ – ಜೀರ್ಣೋದ್ಧಾರ ಲಾಂಛನ ಅನಾವರಣ”, ಸಮಸ್ತ ಭಕ್ತರಿಗೆ ಕಾಣಿಕೆ ಡಬ್ಬಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಪ್ರಸಾದ್ ಜಿ ಶೆಣೈ ಹೇಳಿದ್ದಾರೆ.

ಅವರು ಶನಿವಾರ ಕಾಪು ಹಳೆಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾಪು ಶ್ರೀ ಹಳೆ ಮಾರಿಯಮ್ಮನ ದೇಗುಲ ಜೀರ್ಣೋದ್ಧಾರ ಆಗಬೇಕೆಂದು ಲಕ್ಷಾಂತರ ಭಕ್ತರ ಬಹು ಕಾಲದ ಕನಸಾಗಿದ್ದು, ಶ್ರೀ ದೇವಿಯ ಸಮ್ಮುಖ ಊರಿನ ಗುರು ಹಿರಿಯರ, ಗಣ್ಯರ, ಸಮಸ್ತ ಭಕ್ತಾಧಿಗಳ ಸಹಭಾಗಿತ್ವದಲ್ಲಿ ಇದಕ್ಕೆ ಮುನ್ನುಡಿ ಇಡಲಾಗುತ್ತಿದೆ.

ಅಂದಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಾಪು ಶ್ರೀ ವೆಂಕಟರಮಣ ಹಾಗೂ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಕೆ ಕಮಲಾಕ್ಷ ಭಟ್, ಧಾರ್ಮಿಕ ವಿದ್ವಾಂಸರು, ಪ್ರಸಿದ್ದ ಪಂಚಾಂಗಕರ್ತರು ಹಾಗೂ ಶ್ರೀ ವೆಂಕಟರಮಣ ದೇವಸ್ಥಾನದ ತಂತ್ರಿಗಳಾದ ಡಾ. ಎಂ. ಪಂಡಿತ್ ನರಸಿಂಹ ಆಚಾರ್ಯ ಮಂಗಳೂರು ಉಪಸ್ಥಿತರಿರುವರು

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾಪು ಇದರ ಮಾಜಿ ಅಧ್ಯಕ್ಷ ಗೋಕುಲ್‌ದಾಸ್ ಆನಂದ್ರಾಯ ಶೆಣೈ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಲಾಲಾಜಿ ಅರ್ ಮೆಂಡನ್, ಜಿ.ಎಸ್.ಬಿ. ಸರ್ವ ದೇವಳಗಳ ಒಕ್ಕೂಟದ ಅಧ್ಯಕ್ಷ ಅತುಲ್ ಕುಡ್ವಾ ಮುಲ್ಕಿ, ಕಾಪು ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕೇಸರ ಮನೋಹರ್ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ, ಕಾಪು ಬಿಲ್ಲವ ಸಂಘದ ಅಧ್ಯಕ್ಷ ವಿಕ್ರಮ್ ಕಾಪು, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಮೋಹನ್ ಬಂಗೇರ, ಕಾಪು ಶ್ರೀ ವೆಂಕಟರಮಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೆ. ಲಕ್ಷ್ಮೀನಾರಾಯಣ ನಾಯಕ್ ಕಾಪು, ಡಾ. ಕೆ. ನಾಗಾನಂದ ಭಟ್ ಉಪಸ್ಥಿತರಿರುವರೆಂದು ಪ್ರಸಾದ್‌ ಶೆಣೈ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಹ ಮೊಕ್ತೇಸರರಾದ ಸದಾಶಿವ ಕಾಮತ್, ರಾಮ ನಾಯಕ್, ಶ್ರೀಕಾಂತ್ ಭಟ್, ರಾಜೇಶ್ ಎಂ ಶೆಣೈ, ಸದಸ್ಯರಾದ ಮೋಹನದಾಸ್ ಕಿಣಿ, ಸುನಿಲ್ ಪೈ, ಚಂದ್ರಕಾಂತ್ ಕಾಮತ್, ಕೃಷ್ಣಾನಂದ ನಾಯಕ್‌ ಮತ್ತು ರಾಜೇಶ್ ಶೆಣೈ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

7 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago