ಬೆಂಗಳೂರು: ಮಾ.3ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, 25 ದಿನ ನಡೆಯುವ ಅಧಿವೇಶನದಲ್ಲಿ ಹಲವು ಬಿಲ್ಗಳು ಮಂಡನೆಯಾಗಲಿವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಧಾನಸಭಾಧ್ಯಕ್ಷ, ಮಾ.5ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ ಎಂದರು. ಕರ್ನಾಟಕ ಲೋಕಾಯುಕ್ತ ತಿದ್ದುಪಡಿ ವಿಧೇಯಕ ಸೇರಿ 6 ವಿಧೇಯಕಗಳ ಮಂಡನೆಯಾಗಲಿದೆ ಎಂದು ತಿಳಿಸಿದರು.
ಸದನದಲ್ಲಿ ಶಾಸಕರು ಸಕ್ರಿಯವಾಗಿ ಪಾಲ್ಗೊಳ್ಳಲು ಅವಕಾಶವಿದೆ. ಹೆಚ್ಚಿನ ಸಮಯಾವಕಾಶ ಇರುವುದರಿಂದ ಸದಸ್ಯರು ಇದನ್ನು ಸದುಪಯೋಗ ಮಾಡಿಕೊಂಡು, ರಚನಾತ್ಮಕ ಚರ್ಚೆಯಲ್ಲಿ ಪಾಲ್ಗೊಳ್ಳಲು ಇದು ಉತ್ತಮ ಅವಕಾಶ ಎಂದರು.
ಮಾ.2 ಮತ್ತು 3ರಂದು ಸದನದಲ್ಲಿ ಸಂಪೂರ್ಣವಾಗಿ ಸಂವಿಧಾನ ಕುರಿತು ಚರ್ಚೆಯಾಗಲಿದೆ. ಆಗ ಯಾವುದೇ ರಾಜಕೀಯ ಚರ್ಚೆಗೆ ಅವಕಾಶ ಇರುವುದಿಲ್ಲ. ಸಂವಿಧಾನದ ಆಶಯ, ಮೂಲ ಉದ್ದೇಶ ಮಾತ್ರ ಈ ವೇದಿಕೆಯಲ್ಲಿ ಚರ್ಚೆಯಾಗಲಿದೆ ಎಂದು ಮಾಹಿತಿ ನೀಡಿದರು.
ಈ ಬಾರಿಯೂ ಮೀಡಿಯಾ ಕ್ಯಾಮರಾಗಳಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ. ಲೋಕಸಭಾ ಮತ್ತು ರಾಜ್ಯಸಭಾ ಮಾದರಿ ಅನುಸರಿಸುವುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಈ ಹಿಂದಿನ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿದೆ. ದೃಶ್ಯ ಮಾಧ್ಯಮದ ಕ್ಯಾಮರಾಗಳಿಗೆ ವಿಧಾನಸಭಾ ಸಭಾಂಗಣದ ಒಳಗೆ ಪ್ರವೇಶವಿಲ್ಲ. ಕಲಾಪದ ನೇರ ಪ್ರಸಾರಕ್ಕೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಕ್ಯಾಮರಾಮನ್ಗಳಿಗೆ ವಿಧಾನಸಭೆಯ ಪಾಸ್ ನೀಡದಂತೆ ಆದೇಶ ನೀಡಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…