ಮಾ.7ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿ.ಕೆ ಶಿವಕುಮಾರ್  – Vishwanews24

Featured, ರಾಜ್ಯ ನ್ಯೂಸ್

ಮಾ.7ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿ.ಕೆ ಶಿವಕುಮಾರ್ 

ಸಕಲೇಶಪುರ: ಈಗಾಗಲೇ ಜೆಡಿಎಸ್ ಪಕ್ಷದಿಂದ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ಕ್ಷೇತ್ರಗಳಿಗೆ ಅಭ್ಯರ್ಧಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಮಾರ್ಚ್ 7ರಂದು ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಸಲ್ಲಿಸಲಾಗಿದ್ದಂತ ಆಕಾಂಕ್ಷಿಗಳ ಅರ್ಜಿಗಳನ್ನು ಪರಿಶೀಲಿಸಿ, ಸಮಾಲೋಚನೆ ನಡೆಸಲಾಗಿದೆ. ಇದಲ್ಲದೇ ವೀಕ್ಷಕರು ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ, ಕೆಪಿಸಿಸಿಗೆ ವರದಿ ನೀಡಲಿದ್ದಾರೆ ಎಂದರು.

ರಾಜ್ಯ ಸರ್ಕಾರಿ ನೌಕರರ ಮುಷ್ಕರ : ಉಡುಪಿಯಲ್ಲಿ ಬೆಂಬಲ  – Vishwanews24

ಕಾಂಗ್ರೆಸ್ ಪಕ್ಷವು ವೀಕ್ಷಕರು ನೀಡುವಂತ ವರದಿಯ ಆಧಾರದ ಮೇಲೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ, ಹೈಕಮಾಂಡ್ ಗೆ ಕಳುಹಿಸಲಾಗಿದ್ದು, ಶೀಘ್ರವೇ ಕಾಂಗ್ರೆಸ್ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂಬುದಾಗಿ ತಿಳಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದನ್ನು ನಿರ್ಮೂಲನೇ ಮಾಡಬೇಕಾದರೇ ಬಿಜೆಪಿ ಪಕ್ಷವನ್ನು ಕಿತ್ತೊಗೆಯಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಇದಕ್ಕೆ ರಾಜ್ಯದ ಜನತೆ ಬೆಂಬಲ ಕಾಂಗ್ರೆಸ್ ಪಕ್ಷದ ಮೇಲೆ ಇರಲಿದೆ ಎಂಬುದಾಗಿ ಮನವಿ ಮಾಡಿದರು.

ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿ – ‘ಗುರು-ಶುಕ್ರ ಗ್ರಹ’ಗಳ ಜೋಡಿ – Vishwanews24

Leave a Reply