ಚೆನ್ನೈ : ಮಿಚಾಂಗ್ ಚಂಡಮಾರುತದ ತಮಿಳುನಾಡಿನಲ್ಲಿ ಜಲ ಪ್ರಳಯವನ್ನೇ ಸೃಷ್ಠಿಸಿದೆ. ಅದರಲ್ಲೂ ಚೆನ್ನೈ ಮಳೆಯಿಂದಾಗಿ ಸಂಪೂರ್ಣ ಮುಳುಗಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರೈಲು ವಿಮಾನ ಸೇವೆಗಳು ಸಂಪೂರ್ಣ ನಿಂತು ಹೋಗಿವೆ. ಇಂದು ಚೆನ್ನೈನಲ್ಲಿ ಸುರಿದ ಮಳೆಯು 2015ರ ಪ್ರವಾಹದ ನಂತರ ಸುರಿದ “ಅ ತಿದೊಡ್ಡ ಮಳೆ”ಯಾಗಿದೆ ಎಂದು ಹೇಳಲಾಗುತ್ತಿದೆ.
ರಾಜಧಾನಿ ಚೆನ್ನೈ ಮತ್ತು ನೆರೆಯ ಮೂರು ಜಿಲ್ಲೆಗಳಲ್ಲಿ ಮಿಚಾಂಗ್ ತೀವ್ರ ಪರಿಣಾಮ ಬೀರಿದೆ. ಕಳೆದೆರಡು ದಿನದಲ್ಲಿ 40 ಸೆಂ.ಮೀ ಮಳೆ ಆಗಿದೆ. ಚೆನ್ನೈ ವಿಮಾನ ನಿಲ್ದಾಣ, ಪಾಲಿಕೆ ಆವರಣ, ನಗರದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಜನಜೀವನ ನಿಯಂತ್ರಣ ತಪ್ಪಿದೆ. ಇನ್ನು ಮಳೆಗೆ ಮಹಿಳೆ ಸೇರಿ ಐವರು ಸಾವಿಗೀಡಾಗಿದ್ದಾರೆ. ಈ ಪೈಕಿ ಇಬ್ಬರು ವಿದ್ಯುತ್ ತಂತಿ ಸಂಪರ್ಕದಿಂದ ಸಾವಿಗೀಡಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಚೆನ್ನೈನ ಪೆರುಂಗುಡಿಯಲ್ಲಿ ಗರಿಷ್ಠ ಅಂದರೆ 29 ಸೆಂ.ಮೀ ಮಳೆ ಪ್ರಮಾಣ ದಾಖಲಾಗಿದ್ದರೆ, ತಿರುವಲ್ಲೂರು ಜಿಲ್ಲೆಯ ಅವಡಿಯಲ್ಲಿ 28 ಸೆಂ.ಮೀ., ಚೆಂಗಲ್‌ಪೇಟ್‌ನ ಮಾಮಲ್ಲಪುರಂನಲ್ಲಿ 22 ಸೆಂ.ಮೀ ಮಳೆ ಸುರಿದಿರುವುದು ದಾಖಲಾಗಿದೆ.
ರಾಜಧಾನಿಯಲ್ಲಿ ಲಕ್ಷಾಂತರ ನಿವಾಸಿಗಳು ಭಾನುವಾರದಿಂದ ಸೋಮವಾರ ಸಂಜೆಯವರೆಗೂ ಮನೆಗಳಲ್ಲಿಯೇ ಬಂದಿಯಾಗಿದ್ದರು. ಈ ಹಿಂದೆ 2015ರಲ್ಲಿ ಮೂಡಿದ್ದ ಮುಳುಗಡೆ ಭೀತಿ ಮತ್ತೆ ನಾಗರಿಕರನ್ನು ಕಾಡುತ್ತಿದೆ. ಹೀಗಾಗಿ, ಅಗತ್ಯ ವಸ್ತುಗಳು, ಕುಡಿಯುವ ನೀರಿನ ಸಂಗ್ರಹಕ್ಕೆ ಜನರು ಒತ್ತು ನೀಡಿದ್ದು, ಇವುಗಳಿಗೆ ಬೇಡಿಕೆ ಹೆಚ್ಚಿದೆ. ಸೋಮವಾರ ತಡರಾತ್ರಿಯವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದು, ಸಹಜ ಸ್ಥಿತಿಗೆ ಮರಳಲು ಸ್ವಲ್ಪ ಸಮಯ ಹಿಡಿಯಲಿದೆ.
ಚೆನ್ನೈನ ವಿಮಾನ ನಿಲ್ದಾಣ ಸೇರಿದಂತೆ ಬಹುತೇಕ ಭಾಗಗಳು ಜಲಾವೃತವಾಗಿವೆ. ರೈಲು-ವಿಮಾನ ಸಂಚಾರ ಸಹ ಸ್ಥಗಿತಗೊಂಡಿದೆ. ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…