ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯನಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ .ರೈಯನ್ನು ಗೆಲ್ಲಿಸಿ, ನಾವೆಲ್ಲರೂ ಸೇರಿ ಸುಳ್ಯ ಪ್ರದೇಶವನ್ನು ಅಭಿವೃದ್ಧಿ ಮಾಡುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಅವರು ಸುಳ್ಯ ತಾಲೂಕಿನ ಗುತ್ತಿಗಾರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.
ಸುಳ್ಯ ಪ್ರದೇಶದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎಂಬುದು ತನ್ನ ಗಮನಕ್ಕೆ ಬಂದಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸು ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡೋಣ. ನಾವೆಲ್ಲರು ಇಲ್ಲೇ ಸೇರಿ ಸುಳ್ಯದ ಅಭಿವೃದ್ಧಿಯ ಕುರಿತು ಚರ್ಚಿಸಿ ಎಲ್ಲರ ಅಭಿಪ್ರಾಯ, ಬೇಡಿಕೆಗಳನ್ನು ಪಡೆದು ಅಭಿವೃದ್ಧಿಯನ್ನು ಮಾಡೋಣ ಎಂದು ಶಿವಕುಮಾರ್ ಹೇಳಿದರು.
ಸುಳ್ಯದಲ್ಲಿ ಪಕ್ಷವನ್ನು ಇನ್ನಷ್ಟು ಸಂಘಟಿಸಲು ತಾನೇ ಖುದ್ದಾಗಿ ನೇತೃತ್ವ ವಹಿಸುವುದಾಗಿ ಹೇಳಿದ ಡಿ.ಕೆ.ಶಿವಕುಮಾರ್ ಅವರು, ತನ್ನ ಬೂತಿನಲ್ಲಿ ಯಾರೂ ಹೆಚ್ಚು ಲೀಡ್ ತಂದು ಕೊಡುತ್ತಾನೊ ಅವರನೇ ನಿಜವಾದ ಲೀಡರ್ ಆಗಿರುತ್ತಾನೆ ಎಂದು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಕಿವಿ ಮಾತು ಹೇಳಿದರು.
ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ತಮ್ಮದು ಸರ್ವಧರ್ಮಗಳನ್ನು ಗೌರವಿಸುವ, ಸಹಬಾಳ್ವೆಯ ನೈಜ ಹಿಂದೂತ್ವವಾಗಿದೆ. ನಮ್ಮಲ್ಲಿ ಪರಸ್ಪರ ಮನುಷ್ಯರಲ್ಲಿ ದ್ವೇಷ ಮಾಡುವುದಕ್ಕೆ ಅವಕಾಶವೇ ಇಲ್ಲ. ಮಾತ್ರವಲ್ಲದೆ, ಧರ್ಮವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ದುರುಪಯೋಗ ಮಾಡುವುದಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿಗಳಾದ ವೆಂಕಪ್ಪ ಗೌಡ, ಭರತ್ ಮುಂಡೋಡಿ, ಜೆಡಿಎಸ್ ಮುಖಂಡರಾದ ಎಂ.ಬಿ.ಸದಾಶಿವ, ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಜಯಪ್ರಕಾಶ್ ರೈ, ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…