ನೆಲ್ಯಾಡಿ: ‘ಲೋಕಸಭೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಒಂದು ಬಾರಿಯೂ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಧ್ವನಿಯನ್ನು ಎತ್ತದ, ಬಿಜೆಪಿ ಅಭ್ಯರ್ಥಿಯ ಬದಲು, ಕಾಂಗ್ರೆಸ್ ಪಕ್ಷದ ವಿದ್ಯಾವಂತ ಯುವ ಅಭ್ಯರ್ಥಿ ಮಿಥುನ್ ರೈ ಸುಶಿಕ್ಷಿತರಾಗಿದ್ದು ಇವರನ್ನು ಪ್ರಚಂಡ ಬಹುಮತದಿಂದ ಜಿಲ್ಲೆಯ ಪ್ರಜ್ಞಾವಂತ ಮತದಾರರು ಗೆಲ್ಲಿಸಿಕೊಡಬೇಕು’ ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು.
ಸೋಮವಾರ ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಮಿಥುನ್ ರೈ ಸಾಮಾಜಿಕ, ಜನಪರ ಕಾಳಜಿ ಇರುವ ಯುವಕನಾಗಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು’ ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ‘ಮಿಲಿಟರಿ ನಡೆಸಿದ ಕಾರ್ಯಾಚರಣೆ ಪಕ್ಷದ ಲಾಭಕ್ಕಾಗಿ ಬಳಸಲು ಮುಂದಾದ ಬಿಜೆಪಿ ಈ ರೀತಿಯಾಗಿ ದೇಶ ಪ್ರೇಮವನ್ನು ತೋರಿಸುತ್ತದೆ, ಆದರೆ ದೇಶಕ್ಕಾಗಿ ಪ್ರಾಣ ತೆತ್ತ ನಾಯಕರು ಇದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ’ ಎಂದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಮತ ಯಾಚನೆ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿದರು.
ಕರ್ನಾಟಕ ರಾಜ್ಯ ಮಲೆಯಾಳಿ ಕ್ರಿಶ್ಚಿಯನ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಎ.ಸಿ. ಜಯರಾಜ್, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವೀಕ್ಷಕ ನವೀನ್ ಚಂದ್ರ ಶೆಟ್ಟಿ ಕಾಪು, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದನ್ ಕಾಮತ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕೊಕ್ಕಡ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಣ್ಣಪ್ಪ ಗೌಡ ಕಾಶಿ, ಕೊಕ್ಕಡ ಯೂತ್ ಕಾಂಗ್ರೆಸ್‌ನ ಖಲಂದರ್ ಹಳ್ಳಿಂಗೇರಿ, ಜೆಸ್ಟಿನ್ ಕೊಕ್ಕಡ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…