ಉಡುಪಿ: ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಮಹಿಳೆ ಮಿಸೆಸ್ ಯೂನಿವರ್ಸಲ್‌ಗೆ ಪ್ರವೇಶ ಪಡೆದಿದ್ದಾರೆ.
ಉಡುಪಿ ತೆಂಕಪೇಟೆ ನಿವಾಸಿಗಳಾದ ಅರುಣ್ ಶೆಣೈ, ಅರ್ಚನ ಶೆಣೈ ದಂಪತಿಯ ಪುತ್ರಿ ಡಾ. ಪದ್ಮ ಗಡಿಯಾರ್ ಬ್ರಿಸ್‌ಬೇನ್‌ನಲ್ಲಿ 2018 ಅಕ್ಟೋಬರ್ ತಿಂಗಳಲ್ಲಿ ಯು.ಎಸ್ ಮೂಲದ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸಸ್ ಸೌತ್ ಇಂಡಿಯ ಯೂನಿವರ್ಸಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ 35 ವರ್ಷದ ಡಾ.ಪದ್ಮ ಆಸ್ಟ್ರೇಲಿಯದಲ್ಲಿ ದಂತ ವೈದ್ಯೆಯಾಗಿ ಕಾರ್ಯನಿರ್ವಹಿಸುತಿದ್ದಾರೆ.
ಪತಿ ಡಾ.ಸನಯ್ ಗಡಿಯಾರ್ ವೈದ್ಯರಾಗಿದ್ದು, ಸಮಾ (7) ಮಗಳು, ಶಯನ್ (4) ಮಗ, ಇಬ್ಬರು ಮಕ್ಕಳೊಂದಿಗೆ ಆಸ್ಟ್ರೇಲಿಯದಲ್ಲಿ ನೆಲೆಸಿದ್ದಾರೆ. ಪ್ರಾಥಮಿಕ ಶಿಕ್ಷಣ ಇಂದ್ರಾಳಿ ಶಾಲೆಯಲ್ಲಿ, ಪಿಯುಸಿ ಎಂಜಿಎಂ ಕಾಲೇಜು, ದಂತ ವೈದ್ಯಕೀಯ ಶಿಕ್ಷಣವನ್ನು ಮಂಗಳೂರಿನ ಎನಪೋಯ ವಿಶ್ವವಿದ್ಯಾನಿಲಯದಲ್ಲಿ ಪಡೆದಿದ್ದಾರೆ.
ನನ್ನ ಪತಿ ಸಾಕಷ್ಟು ಸಹಕಾರ, ಪ್ರೋತ್ಸಾಹ ನೀಡಿದ್ದಾರೆ. ಅಂತಿಮ ಸ್ಪರ್ಧೆಯಲ್ಲಿ ನಾನು ಸೇರಿ 10 ಮಂದಿ ಸ್ಪರ್ಧಿಗಳಿದ್ದೆವು. ಫೋಟೊಗ್ರಫಿ, ಕ್ವಿಜ್, ಕ್ಯಾಟ್‌ವಾಕ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಿರೀಟ ಮುಡಿಗೇರಿಸಿಕೊಂಡೆ. ಬ ಓದುವುದು ಮತ್ತು ಬರೆಯುವುದು, ಸಿನಿಮ, ಕ್ರೀಡೆಗಳು ನನ್ನ ನೆಚ್ಚಿನ ಹವ್ಯಾಸ. ‘ಬೈ ಬಿಲ್ಡ್ ಸೆಲ್’ ಎಂಬ ಪುಸ್ತಕ ಬರೆದಿದ್ದು ಶೀಘ್ರದಲ್ಲೆ ಬಿಡುಗಡೆಯಾಗಲಿದೆ ಎಂದರು..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…