ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಉಡುಪಿಯಲ್ಲಿ ಹುಟ್ಟಿ ಬೆಳೆದಿರುವ ಸ್ಪೂರ್ತಿ ಶೆಟ್ಟಿ ಅವರು ಸಾಮಾನ್ಯ ಕುಟುಂಬ ಹಿನ್ನೆಲೆಯಿಂದ ಬಂದವರಾಗಿದ್ದು, ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದಿದ್ದಾರೆ.
ಎಂಬಿಎ ಪದವೀಧರೆಯಾಗಿರುವ ಅವರು ಪೂರ್ಣಕಾಲಿಕ ಉದ್ಯೋಗದ ಜೊತೆಗೆ ಹವ್ಯಾಸವಾಗಿ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟು ಇದೀಗ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯ ವೇದಿಕೆಯನ್ನು ತಲುಪಿದ್ದಾರೆ.
ಈ ಹಿಂದೆ ಕರ್ನಾಟಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತು ಪ್ರವೇಶಿಸಲು ವಿಫಲರಾಗಿದ್ದ ಸ್ಪೂರ್ತಿ, ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಿಸ್ ಯುನಿವರ್ಸ್ ಇಂಡಿಯಾ ಫೈನಲ್‌ಗೆ ಆಯ್ಕೆಯಾಗಿದ್ದಾರೆ.
ಸ್ಪೂರ್ತಿ ಅವರ ತಾಯಿ ಮಣಿಪಾಲ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಸ್ಪೂರ್ತಿ ಈ ಸಾಧನೆ ಮಾಡಿದ್ದಾರೆ.
ಆಗಸ್ಟ್ 23ರಂದು ನವದೆಹಲಿಯಲ್ಲಿ ನಡೆಯಲಿರುವ ಮಿಸ್ ಯುನಿವರ್ಸ್ ಇಂಡಿಯಾ ಅಂತಿಮ ಸುತ್ತಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸುಮಾರು 50 ಸ್ಪರ್ಧಿಗಳೊಂದಿಗೆ ಸ್ಪೂರ್ತಿ ಶೆಟ್ಟಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ. ಉಡುಪಿ ಜಿಲ್ಲೆಯ ಈ ಯುವತಿಯ ಸಾಧನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…