ಭಾರತೀಯ ಕಾಲಮಾನ ಪ್ರಕಾರ ಜನವರಿ 15 ರಂದು ಬೆಳಗ್ಗೆ 6.30ಕ್ಕೆ 71ನೇ ಭುವನ ಸುಂದರಿ ಸ್ಪರ್ಧೆಯು ದಕ್ಷಿಣ ಅಮೆರಿಕಾದ ಲೌಸಿಯಾನಾ ರಾಜ್ಯದ ನ್ಯೂ ಆರಿಲಿನ್ಸ್ ನಗರದ ಎರ್ನೆಸ್ಟ್ ಎನ್ ಮೋರಿಯಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ನಾನಾ ದೇಶಗಳ 86 ಸುಂದರಿಯರು ಭಾಗಿ ಆಗುತ್ತಿದ್ದು, ಭಾರತದಿಂದ ದಿವಿತಾ ರೈ ಪ್ರತಿನಿಧಿಸುತ್ತಿದ್ದಾರೆ. ದಿವಿತಾ ಕರ್ನಾಟಕದ ಮಂಗಳೂರು ಮೂಲದವರು ಎನ್ನುವುದು ವಿಶೇಷ.
ಈಗಾಗಲೇ 2022ರಲ್ಲಿ ‘ದಿವಾ ಮಿಸ್ ಯೂನಿವರ್ಸ್’ ಟೈಟಲ್ ಅನ್ನು ಗೆದ್ದಿರುವ ದಿವಿತಾ ರೈ ಮತ್ತು ಕುಟುಂಬ ನೆಲೆಸಿರುವುದು ಮುಂಬೈನಲ್ಲಿ. ಹಾಗಾಗಿ ಮುಂಬೈನಲ್ಲಿ ಇವರು ವಿದ್ಯಾಭ್ಯಾಸ ಮುಗಿಸಿದ್ದಾರೆ. ಜೆಜೆ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಆರ್ಕಿಟೆಕ್ಚರ್ ಪದವಿಯನ್ನು ಪೂರೈಸಿರುವ ಇವರು ಹತ್ತಾರು ಹವ್ಯಾಸಗಳನ್ನು ಹೊಂದಿದ್ದಾರೆ. ಅವರೇ ಹೇಳಿಕೊಂಡಂತೆ ಬ್ಯಾಡ್ ಮಿಟನ್ ಆಟಗಾರ್ತಿ, ಚಿತ್ರಕಲೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಮಾಡೆಲಿಂಗ್ ಅನ್ನು ವೃತ್ತಿಯನ್ನಾಗಿ ಸ್ವೀಕರಿಸಿದ್ದಾರೆ.
2021ರಲ್ಲಿ ಭುವನ ಸುಂದರಿ ಟೈಟಲ್ ಅನ್ನು ಭಾರತದವರೇ ಆದ ಹರ್ನಾಜ್ ಸಂಧು ಗೆದ್ದಿದ್ದರು. ಈ ಬಾರಿ ದಿವಿತಾ ರೈ ಗೆ ಅಂಥದ್ದೊಂದು ಕಿರೀಟ ಗೆಲ್ಲುವ ಅವಕಾಶ ಸಿಕ್ಕಿದೆ. ಈ ಬಾರಿಯ ಭುವನ ಸುಂದರಿ ಕಿರೀಟ ಯಾರ ಪಾಲಾಗುತ್ತದೆಯೋ ನಾಳೆಯವರೆಗೂ ಕಾದು ನೋಡಬೇಕು.
Join our Whatsapp group by clicking the below link 👇👇
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…