ಮಿಸ್ ಯೂನಿವರ್ಸ್ 2020 ; ಭಾರತವನ್ನು ಪ್ರತಿನಿಧಿಸಲಿದ್ದಾರೆ ಕರಾವಳಿಯ ಮೂಲದ ಆಡ್ಲಿನ್ ಕ್ಯಾಸ್ಟೆಲಿನೋ -Vishwanews24

ಮಂಗಳೂರು: ಕರಾವಳಿ ಮೂಲದ ಚೆಲುವೆ ಆಡ್ಲಿನ್ ಕ್ಯಾಸ್ಟೆಲಿನೋ ಈ ಬಾರಿಯ ಮಿಸ್ ಯೂನಿವರ್ಸ್ 2020 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಮಿಸ್ ದಿವಾ 2020 ಇದರ ಎಂಟನೇ ಆವೃತ್ತಿ ಮುಂಬೈನ ಅಂಧೇರಿಯಲ್ಲಿ ನಡೆದಿತ್ತು. 20 ಮಂದಿ ಹೆಸರಾಂತ ಮಾಡೆಲ್‍ಗಳು ಪಾಲ್ಗೊಂಡಿದ್ದ ಈ ಸ್ಪರ್ಧೆಯಲ್ಲಿ ಕಳೆದ ಬಾರಿಯ ಚಾಂಪಿಯನ್ ವರ್ತಿಕಾ ಸಿಂಗ್ ವಿಜಯಿಯೆಂದು ಘೋಷಣೆಯಾದ ಬಳಿಕ ಆಡ್ಲಿನ್‍ಗೆ ಕಿರೀಟ ತೊಡಿಸಿದರು. ವರ್ತಿಕಾ ಸಿಂಗ್ 2019ರ ಸಾಲಿನ ಮಿಸ್ ಯೂನಿವರ್ಸ್ ಇಂಡಿಯಾ ಆಗಿ ಆಯ್ಕೆಯಾಗಿದ್ದರು.

ಕರಾವಳಿ ಮೂಲದ ಆಡ್ಲಿನ್ ಕ್ಯಾಸ್ಟೆಲಿನೋ ಕಳೆದೆರಡು ವರ್ಷದಲ್ಲಿ ಬೇರೆ ಬೇರೆ ವಿಭಾಗದಲ್ಲಿ ಜಯ ಗಳಿಸಿದ್ದ ಮಾಡೆಲ್‍ಗಳ ಪರಸ್ಪರ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯ ಸುತ್ತಿನಲ್ಲಿ ಆಡ್ಲಿನ್ ಅವರನ್ನು ವಿಜಯಿಯೆಂದು ಘೋಷಿಸಲಾಯಿತು.

ಆವಿತ್ರಿ ಚೌಧರಿ ಮಿಸ್ ದಿವಾ 2020 ಆಗಿ ಆಯ್ಕೆಯಾಗಿದ್ದು, ಮಿಸ್ ಸುಪ್ರನ್ಯಾಷನಲ್ 2020 ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. 2019ರಲ್ಲಿ ಶೆಫಾಲಿ ಸೂದ್ ಸುಪ್ರನ್ಯಾಷನಲ್ ಇಂಡಿಯಾ ಆಗಿ ಮೂಡಿ ಬಂದಿದ್ದರು. ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ 2016ರಲ್ಲಿ ಮಿಸ್ ಸುಪ್ರನ್ಯಾಷನಲ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.

ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ನಡೆದ ಈ ಮಾಡೆಲಿಂಗ್ ಸ್ಪರ್ಧೆಯಲ್ಲಿ ಬಾಲಿವುಡ್ ನಟರಾದ ಅನಿಲ್ ಕಪೂರ್, ಆದಿತ್ಯ ರಾಯ್ ಕಪೂರ್, ಮಿಸ್ ಯೂನಿವರ್ಸ್ 2000 ಲಾರಾ ದತ್ತಾ, ಡಿಸೈನರ್ ಗಳಾದ ಶಿವನ್ ಮತ್ತು ನರೇಶ್, ಮಿಸ್ ಸುಪ್ರಾ ನ್ಯಾಶನಲ್ 2014 ಆಶಾ ಭಟ್, ಮಿಸ್ ಯೂನಿವರ್ಸ್ ಶ್ರೀಲಂಕಾ 2006 ಜಾಕ್ವೇಲಿನ್ ಫೆರ್ನಾಂಡಿಸ್, ಡಿಸೈನರ್ ನಿಕಿಲ್ ಮೆಹ್ರಾ, ಗ್ಯಾವಿನ್ ಮಿಗೆಲ್ ತೀರ್ಪುಗಾರರ ತಂಡದಲ್ಲಿದ್ದರು. ನಟಿ ಮಲೈಕಾ ಅರೋರಾ ಫೈನಲ್ ಸ್ಪರ್ಧೆಯಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

7 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

8 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

8 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

9 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

10 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

10 hours ago