ಬೆಂಗಳೂರು : ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೀನುಗಾರರ ಯಾಂತ್ರೀಕೃತ ಬೋಟ್ ಗಳಿಗೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಸೂಚಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ತೆರಿಗೆ ರಹಿತ ಡೀಸೆಲ್ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಡೀಸೆಲ್ ಬೆಲೆ ಏರಿಕೆ, ಮತ್ಸ್ಯಕ್ಷಾಮ ಹಾಗೂ ಮೀನಿಗೆ ಯೋಗ್ಯ ಧಾರಣೆ ಸಿಗದೆ ಮೀನುಗಾರರು ಸುಸ್ತಿದಾರರಾಗಿದ್ದಾರೆ. ಪ್ರಸ್ತುತ ಮೀನುಗಾರರಿಂದ ಮಾರಾಟ ತೆರಿಗೆ ಪಡೆದುಕೊಂಡು ನಂತರ ಅವರ ಖಾತೆಗೆ ಈ ಮೊತ್ತವನ್ನು ಸರ್ಕಾರ ಜಮಾ ಮಾಡುತ್ತಿದೆ. ಈ ತೆರಿಗೆ ಹಣ ಕ್ರಮಬದ್ಧವಾಗಿ ಬರದಿರುವ ಕಾರಣ ತೊಂದರೆ ಆಗುತ್ತಿದೆ. ಆದ್ದರಿಂದ ಹಿಂದಿನಂತೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆರಹಿತ ಡೀಸೆಲ್ ನೀಡುವಂತೆ ಹಾಗೂ ಡೀಸೆಲ್ ಪ್ರಮಾಣ ಹೆಚ್ಚಿಸುವಂತೆ ನಿಯೋಗ ಮನವಿ ಮಾಡಿತ್ತು.
ಪರಿಹಾರ: ನೌಕಾಪಡೆಯ ಹಡಗು ಡಿಕ್ಕಿ ಹೊಡೆದು ಸುರ್ವಣ ತ್ರಿಭುಜ ಎಂಬ ದೋಣಿಯಲ್ಲಿದ್ದ ಮೀನುಗಾರರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಗಳಿಗೆ ಪರಿಹಾರ ಕೊಡಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…