Featured

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ

ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರಿಗೆ 2026-27ನೇ ಸಾಲಿನಲ್ಲಿ 24,090 ಕಿಲೋ ಲೀಟರ್(ಕೆ.ಎಲ್.) ಸಬ್ಸಿಡಿ ರಹಿತ ಸೀಮೆಎಣ್ಣೆಯನ್ನು ಪ್ರತ್ಯೇಕವಾಗಿ ನೀಡುವಂತೆ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಾಂಪ್ರದಾಯಿಕ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಸಂಸದ ರಾಘವೇಂದ್ರ ಅವರು, ಪ್ರಸಕ್ತ ಸೀಮೆಎಣ್ಣೆ ಬೆಲೆ 160 ರೂ. ಗಿಂತ ಹೆಚ್ಚಾಗಿದೆ. ರಾಜ್ಯದ ಸಬ್ಸಿಡಿ ಬಳಿಕವೂ ಮೀನುಗಾರರ ಮೇಲೆ ಸುಮಾರು 125 ರೂ. ನಷ್ಟು ಹೊರೆ ಪ್ರತಿ ಲೀಟರ್‌ಗೆ ಬೀಳುತ್ತಿದೆ. 8,030 ದೋಣಿಗಳಿಗೆ ವಾರ್ಷಿಕವಾಗಿ 24,090 ಕೆ.ಎಲ್. ಸೀಮೆಎಣ್ಣೆ ಅಗತ್ಯವಿದೆ. ಆದರೆ ಪ್ರಸ್ತುತ ಪಿಡಿಎಸ್ ಮುಖೇನ ಪ್ರತೀ ತ್ರೈಮಾಸಿಕಕ್ಕೆ ಕೇವಲ 2,868 ಕೆ. ಎಲ್. ಹಂಚಿಕೆಯಾಗುತ್ತಿದೆ. ಇದು ಮೀನುಗಾರಿಕೆಗೆ ಸಾಲುತ್ತಿಲ್ಲ. ಹಾಗಾಗಿ ಸಬ್ಸಿಡಿ ರಹಿತ ಸೀಮೆಎಣ್ಣೆಯನ್ನು ಪ್ರತ್ಯೇಕವಾಗಿ ಹಂಚಿಕೆ ಮಾಡಬೇಕು ಎಂದರು ಮನವಿ ಮಾಡಿದರು. ಸಚಿವರ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಂಸದರು ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago