Featured

ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ : ಸಚಿವ ಅಂಗಾರ -Vishwanews24

ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ : ಸಚಿವ ಅಂಗಾರ -Vishwanews24

ಮಂಗಳೂರು : ಸರ್ಕಾರ ಮೀನುಗಾರರ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮೀನುಗಾರರು ಇವುಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ ತಿಳಿಸಿದರು.

ಅವರು  ಮಂಗಳೂರು ಬಂದರಿನ ಮತ್ಸ್ಯಗಂಧಿ ಸಭಾಂಗಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ -Vishwanews24

ಜಿಲ್ಲೆಯಲ್ಲಿ ನಾಡದೋಣಿಗಳ ಜೆಟ್ಟಿಗಳು ಹಾಗೂ ಬಂದರಿನ ಹೂಳೆತ್ತುವ ಕಾರ್ಯಗಳು ಹೆಚ್ಚಾಗಿ ನಡೆಯಬೇಕು ಹಾಗೂ ಬಂದರುಗಳಲ್ಲಿ ಜೆಟ್ಟಿಗಳ ವಿಸ್ತರಣೆಯಾಗಬೇಕು. ಜೊತೆಗೆ ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಮೀನುಗಾರಿಕೆ ಉತ್ಪಾದಕರ ಸಂಸ್ಥೆ ಕುರಿತ ಮಾಹಿತಿ ಶಿಬಿರದಿಂದ ಹೆಚ್ಚಿನ ಮೀನುಗಾರರು ಇದರ ಉಪಯೋಗ ಪಡೆಯಬೇಕು ಎಂದ ಅವರು, ಸುಮಾರು 100 ಕ್ಕೂ ಹೆಚ್ಚಿನ ಸಂಖ್ಯೆಯ ಮೀನುಕೃಷಿಕರು, ಮೀನುಗಾರರು ಈ ರೀತಿಯ ಸಂಸ್ಥೆಗಳನ್ನು ಮಾಡಿಕೊಳ್ಳುವುದರಿಂದ ಮೀನುಗಾರರ ಹಲವು ಸಂಕಷ್ಟಗಳಿಗೆ ಪರಿಹಾರ ಸಿಗುತ್ತದೆ. ಮುಖ್ಯವಾಗಿ ಅವರ ಉತ್ಪನ್ನಗಳಿಗೆ ಉತ್ತಮ ಬೆಲೆ, ಸೂಕ್ತ ಮಾರುಕಟ್ಟೆ ಸಿಗುತ್ತದೆ ಎಂದರು.

ಜೆಡಿಎಸ್‌‌ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24

ಮೀನುಗಾರಿಕೆಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹಾಗೂ ಮೀನುಗಾರಿಕೆಯ ಉನ್ನತಿಗಾಗಿ ಸರ್ಕಾರದಿಂದ ನೀಡಲಾಗುವ ಆರ್ಥಿಕ ಸಹಾಯಧನ, ಕಾರ್ಯಕ್ರಮಗಳು ಯೋಜನೆಗಳು ಸೇರಿದಂತೆ ಬ್ಯಾಂಕ್‍ಗಳಲ್ಲಿ ಸಿಗುವ ಸೌಲಭ್ಯವನ್ನು ಮೀನು ಉತ್ಪಾದಕರ ಸಂಸ್ಥೆ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದು ಎಂದರು. ಸರ್ಕಾರದಿಂದ ಸಿಗುವ ಅನುದಾನದಲ್ಲಿ ಮೀನುಗಾರರ ಸುರಕ್ಷತೆಗೆ ಆದ್ಯತೆ ನೀಡಲಾಗುವುದು ಎಂದರು.

ಈಗಾಗಲೇ ಬಂದರಿನಲ್ಲಿ ಕೈಗೊಳ್ಳಲಾಗಿರುವ ಡ್ರೆಜ್ಜಿಂಗ್ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೋಟು ತಂಗಲು ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಹಲವು ಕಷ್ಟಗಳನ್ನು ಪರಿಹರಿಸಲು ಮೀನುಗಾರರು ಮನವಿ ಮಾಡಿದ್ದಾರೆ. ಸರ್ಕಾರದಿಂದ ಮೀನುಗಾರರ ಕಷ್ಟಗಳನ್ನು ಪರಿಹರಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24

ಕಾರ್ಯಕ್ರಮದಲ್ಲಿ ಕೆ.ಎಫ್.ಡಿ.ಸಿ ಯ ಅಧ್ಯಕ್ಷ ನಿತೀನ್ ಕುಮಾರ್, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ದೊಡ್ಮಣಿ, ಮಹಾನಗರ ಪಾಲಿಕೆಯ ಸದಸ್ಯ ಅಬ್ದುಲ್ ಲತೀಫ್, ಭಾಸ್ಕರ ಚಂದ್ರ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago