Featured

ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ – Vishwanews24

ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ : ಸಚಿವ ಎಸ್.ಅಂಗಾರ

ಯಾದಗಿರಿ: ‘ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಳಸಮುದ್ರ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ’ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ನಗರದ ಹೊರವಲಯದಲ್ಲಿ ಜಿಲ್ಲಾಡಳಿತ, ಮೀನುಗಾರಿಕೆ ಇಲಾಖೆ ವತಿಯಿಂದ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಒಳನಾಡು ಮೀನುಗಾರಿಕೆ ಹಾಗೂ ಕರಾವಳಿ ಮೀನುಗಾರಿಕೆಯಿಂದ ಹಲವಾರು ಕುಟುಂಬಗಳ ಜೀವನ ನಿರ್ವಹಣೆಯಾಗುತ್ತಿದೆ. ಹೀಗಾಗಿ ಅವರಿಗೆ ಆಳ ಸಮದ್ರ ಮೀನುಗಾರಿಕೆ ಅವಕಾಶ ಕಲ್ಪಿಸಲಾಗಿದ್ದು, ಮೀನುಗಾರರು ಸಮುದ್ರದಲ್ಲಿ ಹಿಡಿದ ಮೀನುಗಳನ್ನು ತಮಗೆ ಒದಗಿಸಲಾದ ಬೋಟ್ ಮೂಲಕ ತಂದು ಮೀನುಗಾರಿಕೆ ಮಾಡಲು ಹಾಗೂ ಅವುಗಳನ್ನು ರಫ್ತು ಮಾಡಲು ಅನುಕೂಲವಾಗಲಿದೆ’ ಎಂದರು.

‘ಕೇಂದ್ರ ಸರ್ಕಾರ ಮತ್ಸ್ಯ ಸಂಪದ ಯೋಜನೆ ಜಾರಿಗೆ ತಂದಿದ್ದು, ರಾಜ್ಯದಲ್ಲಿನ ಮೀನುಗಾರರಿಗೆ ಈ ಯೋಜನೆಯಡಿಯಲ್ಲಿ ಮೀನುಗಾರಿಕೆ ಮಾಡಲು ಅನುಕೂಲವಾಗುವಂತೆ ಒಂದು ನೂರು ಬೋಟ್‌ಗಳನ್ನು ಒದಗಿಸಲು ಬಜೆಟ್‌ನಲ್ಲಿ ಅವಕಾಶ ಒದಗಿಸಿದೆ’ ಎಂದು ತಿಳಿಸಿದರು.

‘ಜಿಲ್ಲೆಯ ಭೀಮಾ ನದಿಯಿಂದ ಹಾಗೂ ಅಕ್ಕಪಕ್ಕ ಕೆರೆಗಳಿಂದ ಹಿಡಿದ ಮೀನುಗಳನ್ನು ಇಲ್ಲಿಯೇ ಮಾರಾಟ ಮಾಡಲು ಮೀನು ಮಾರುಕಟ್ಟೆ ತೆರೆಯಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಚಿವರು ಸಲಹೆ ನೀಡಿದರು.

‘ಮೀನುಗಾರರು ಹಾಗೂ ಖರೀದಿದಾರಿಗೆ ಅನುಕೂಲ ಕಲ್ಪಿಸಲಾಗಿದ್ದು, ಮಾರುಕಟ್ಟೆಗೆ ಬಂದು ಸೂಕ್ತ ಬೆಲೆಗೆ ಮಾರಾಟ ಮಾಡಲು ಅನುಕೂಲವಾಗಲಿದೆ’ ಎಂದರು.’ಮೀನು ಮಾರುಕಟ್ಟೆಯಲ್ಲಿ ಮೀನುಗಾರರು ಮಾರಾಟಕ್ಕೆ ತರುವ ಮೀನುಗಳು ಕೆಡದಂತೆ ಇರಿಸಲು ಶೀಥಲೀಕರಣ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮೀನಿ‌ನ ತಾಜಾತನ ಕಾಪಾಡಬಹುದಾಗಿದೆ’ ಎಂದರು.

ಮಂಗಳೂರು ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ್ ಆರ್ ನಾಯ್ಕ್‌, ಕೃಷ್ಣಾ ಕಾಡಾ ಭೀಮರಾಯನಗುಡಿ ಶರಣಪ್ಪ ತಳವಾರ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ಮೀನುಗಾರಿಕೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ ಈ ಸಂದರ್ಭದಲ್ಲಿ ಇದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago