Featured

ಮೀನುಗಾರರ ಪತ್ತೆಗೆ ಸರಕಾರಗಳ ನಿರ್ಲಕ್ಷ್ಯ ; ಜ.6 ರಂದು ಬಂದರುಗಳು ಬಂದ್ ಹಾಗೂ ಬೃಹತ್ ಪ್ರತಿಭಟನೆ ..

ಉಡುಪಿ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ನಾಪತ್ತೆಯಾಗಿ 20 ದಿನ ಕಳೆದಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರ ಮೀನುಗಾರರ ಪತ್ತೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಮೀನುಗಾರರು ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

ಮಲ್ಪೆಯಿಂದ ಆಳಸಮುದ್ರಕ್ಕೆ ತೆರಳಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ಹಾಗೂ ಅದರಲ್ಲಿದ್ದ 7 ಮೀನುಗಾರರನ್ನು ಪತ್ತೆ ಹಚ್ಚುವಲ್ಲಿ ರಾಜ್ಯ- ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಕರಾವಳಿಯ ಮೀನುಗಾರರು ಅನಾಥವಾಗಿದ್ದಾರೆ, ಈ ಹಿನ್ನಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮೀನುಗಾರರು ನಿರ್ಧರಿಸಿದ್ದಾರೆ..

ಜನವರಿ 6 ರಂದು ಪ್ರತಿಭಟನೆಯ ಅಂಗವಾಗಿ ಮಲ್ಪೆಯಿಂದ ಉಡುಪಿಯವರೆಗೆ ಪಾದಯಾತ್ರೆ ಮಾಡುತ್ತೇವೆ. 50 ಸಾವಿರ ಮಂದಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡುತ್ತೇವೆ. ರಾಜ್ಯ, ಕೇಂದ್ರ ಸರ್ಕಾರಕ್ಕೆ ಬಿಸಿಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟ ಪಡಿಸಿದರು. ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ರಾಜ್ಯ ಸರಕಾರ ತಲೆ ಕೆಡಿಸಿಕೊಡಿಲ್ಲ. ಸಿಎಂ ಹಾಗು ಉಸ್ತುವಾರಿ ಸಚಿವರು ಇತ್ತ ತಲೆಯೇ ಹಾಕಿಲ್ಲ. ಇದೇ ರೀತಿ ರೈತರಿಗೆ ಸಮಸ್ಯೆಯಾದಾಗಲೂ ಅಸಡ್ಡೆ ತೋರಿಸುತ್ತೀರಾ? ಎಂದು ಅವರು ಕಿಡಿಕಾರಿದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago