Featured

ಮೀನುಗಾರರ ಮೇಲೆ ಹಲ್ಲೆ ಖಂಡನೀಯ: ರಾಜ್ಯದ ಬಡ ಮೀನುಗಾರರಿಗೆ ರಕ್ಷಣೆ ನೀಡಿ : ರಮೇಶ್ ಕಾಂಚನ್ – VIshwanews24

ಮೀನುಗಾರರ ಮೇಲೆ ಹಲ್ಲೆ ಖಂಡನೀಯ: ರಾಜ್ಯದ ಬಡ ಮೀನುಗಾರರಿಗೆ ರಕ್ಷಣೆ ನೀಡಿ : ರಮೇಶ್ ಕಾಂಚನ್

ಕರಾವಳಿ ಕರ್ನಾಟಕದ ಮೀನುಗಾರರ ಮೇಲೆ ಅನ್ಯರಾಜ್ಯದ ಮೀನುಗಾರರು ಮಾಡುತ್ತಿರುವ ಹಲ್ಲೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸುವುದರೊಂದಿಗೆ ರಾಜ್ಯದ ಬಡ ಮೀನುಗಾರರಿಗೆ ರಕ್ಷಣೆ ನೀಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ.

ಬಡ ಮೀನುಗಾರರ ಮೇಲೆ ವಿವಿಧ ರೀತಿಯಲ್ಲಿ ಹಲ್ಲೆಗಳು ಆಗುತ್ತಿದ್ದು ನೆರೆ ರಾಜ್ಯದಲ್ಲಿ ತಮ್ಮ ಹೊಟ್ಟೆ ಪಾಡಿಗಾಗಿ ತೆರಳಿದ್ದ ವೇಳೆ ಅವರಿಗೆ ಸೂಕ್ತ ರಕ್ಷಣೆ ಇಲ್ಲದೆ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಉಂಟಾಗಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಸಾಹಸಮಯ ಜೀವನದೊಂದಿಗೆ ಸಮುದ್ರದಲ್ಲಿ ಕಾರ್ಯ ನಿರ್ವಹಿಸುವ ಮೀನುಗಾರರು ಕೆಲವೊಮ್ಮೆ ಆಕಸ್ಮಿಕವಾಗಿ ಅನಾಹುತಕ್ಕೆ ಒಳಗಾಗದರೆ ಇನ್ನು ಕೆಲವೊಮ್ಮೆ ನೆರೆರಾಜ್ಯದ ಮೀನುಗಾರರಿಂದ ನಿರಂತರ ಹಲ್ಲೆಗೊಳಗಾಗುತ್ತಿದ್ದಾರೆ.

ಕನ್ಯಾಕುಮಾರಿಯಿಂದ ನೇರ ಸುಮಾರು 50 ನಾಟಿಕಲ್ ಮೈಲು ದೂರದಲ್ಲಿ ಫೆ.8ರಂದು ಕರ್ನಾಟಕದ ಆಳ ಸಮುದ್ರ ದೋಣಿಗಳು ಮೀನುಗಾರಿಕೆ ಮಾಡುತ್ತಿರುವಾಗ ಅನ್ಯರಾಜ್ಯದ ಬೋಟುಗಳು ಕರ್ನಾಟಕದ ಬೋಟುಗಳನ್ನು ಸುತ್ತುವರಿದು ಸೀಸ, ಕಲ್ಲು, ಮರದ ತುಂಡುಗಳಿಂದ ಜಖಂಗೊಳಿಸಿ ರಾಜ್ಯದ ಮೀನುಗಾರರ ಮೇಲೆ ಹಲ್ಲೆ ಮಾಡಿ, ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನುಗಳನ್ನು ದೋಚಿಕೊಂಡು ಹೋಗಿರುವುದು ಖಂಡನೀಯವಾಗಿದೆ. ಈ ಬಗ್ಗೆ ಸರಕಾರ ಕೂಡಲೇ ಎಚ್ಚೆತ್ತು ಮೀನುಗಾರ ಸಮುದಾಯದೊಂದಿಗೆ ನಿಲ್ಲಬೇಕಾಗಿದ್ದು ಇಂತಹ ಕೃತ್ಯ ಎಸಗಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಕರಾವಳಿಯ ಶಾಸಕರು, ಸಂಸದರು ಮುಖ್ಯಮಂತ್ರಿಗಳ ಮೂಲಕ ಒತ್ತಡತಂದು ತಮಿಳುನಾಡಿನ ಸರಕಾರಕ್ಕೆ ಒತ್ತಾಯಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

12 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

13 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

13 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

14 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

14 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

14 hours ago