Featured

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಲ್ಪೆ ಬಂದರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಲ್ಪೆ ಬಂದರಿನ ನೂತನ ಪ್ರವೇಶ ದ್ವಾರದ ಕಾಮಗಾರಿಯ ಬಗ್ಗೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ, ಹಾಗೂ ಕಾಮಗಾರಿಯ ಹಿನ್ನೆಲೆ ಪಾರ್ಕಿಂಗ್ ಪ್ರದೇಶದಲ್ಲಿ ಸಂಗ್ರಹಿಸಿರುವ ಮರಳನ್ನು ತಕ್ಷಣ ತೆರವು ಮಾಡಿ ವಾಹನಗಳ ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸುವಂತೆ ಹೇಳಿದರು.

ಬಂದರಿನ ನಿರ್ಗಮನ ದ್ವಾರ ಅಗಲೀಕರಣಗೊಳ್ಳುವ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಅಲ್ಲಿದ್ದ ರಿಕ್ಷಾ ನಿಲ್ದಾಣವನ್ನು ಈಗಾಗಲೇ ಗುರುತಿಸಿರುವ ಸೂಕ್ತ ಜಾಗಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ರಿಕ್ಷಾ ಚಾಲಕರ ಮನವಿಯಂತೆ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು.

ಮಲ್ಪೆ ಬಂದರಿನ ಮಂಜಿ ಧಕ್ಕೆ ಹಾಗೂ ಬಂದರಿನ ಪರಿಸರದಲ್ಲಿ ರಾತ್ರಿ ವೇಳೆ ದಾರಿ ದೀಪದ ಸಮಸ್ಯೆ ಬಗ್ಗೆ ತಕ್ಷಣ ಸಮರ್ಪಕ ದಾರಿ ದೀಪದ ವ್ಯವಸ್ಥೆ, ಬಂದರಿನ ಸ್ವಚ್ಚತೆ, ಭದ್ರತೆಯ ದೃಷ್ಟಿಯಲ್ಲಿ ಸೆಕ್ಯೂರಿಟಿ ಸಿಬ್ಬಂದಿ, ಸಿ.ಸಿ. ಟಿ. ವಿ ಅಳವಡಿಕೆ ಮೊದಲಾದ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಂಡು ಮೀನುಗಾರರಿಗೆ ಯಾವುದೇ ಸಮಸ್ಯೆಯಾಗದಂತೆ ಮುತುವರ್ಜಿ ವಹಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಮೀನುಗಾರ ಮುಖಂಡರಾದ ಸುರೇಶ್ ಸಾಲ್ಯಾನ್, ರವಿ ಸಾಲ್ಯಾನ್, ರಮೇಶ್ ಕೋಟ್ಯಾನ್, ಲಕ್ಷ್ಮೀಶ ಬಂಗೇರ, ಮಲ್ಪೆ ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳು, ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago