Featured

ಮೀನುಗಾರಿಕಾ ಬೋಟುಗಳಲ್ಲಿ ಸೋಲಾರ್‌ ಅಳವಡಿಕೆ ಕುರಿತು ಪರಿಶೀಲಿಸಿ ಕ್ರಮ: ಎಸ್‌. ಅಂಗಾರ -Vishwanews24

ಮೀನುಗಾರಿಕಾ ಬೋಟುಗಳಲ್ಲಿ ಸೋಲಾರ್‌ ಅಳವಡಿಕೆ ಕುರಿತು ಪರಿಶೀಲಿಸಿ ಕ್ರಮ: ಎಸ್‌. ಅಂಗಾರ -Vishwanews24

ಮಂಗಳೂರು: ಯಾಂತ್ರೀಕೃತ ಮೀನುಗಾರಿಕೆಗೆ ತೆರಳುವ ಬೋಟುಗಳಲ್ಲಿ ದ್ವಿಮುಖ ಸಂವಹನ ಸಂಪರ್ಕ ಸಾಧನಕ್ಕೆ ಅಗತ್ಯವಿರುವ ಬ್ಯಾಟರಿಯನ್ನು ಸೋಲಾರ್‌ ಮೂಲಕ ರಿಚಾರ್ಜ್‌ ಮಾಡಿಕೊಳ್ಳುವ ಸಾಧ್ಯತೆಗಳ ಕುರಿತು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್‌. ಅಂಗಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೀನುಗಾರಿಕಾ ಬೋಟ್‌ಗಳಲ್ಲಿ ಸಂಪರ್ಕ ಸಾಧನಗಳನ್ನು ಅಳವಡಿಸುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ :ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24

ಮೀನುಗಾರರ ಸುರಕ್ಷೆ ಸರಕಾರದ ಆದ್ಯತೆ. ಸಮುದ್ರದ ಬಹುದೂರ ಹೋಗಿ ಮೀನುಗಾರಿಕೆ ಮಾಡುವವರ ಬೋಟುಗಳ ಸ್ಥಿತಿಗತಿಗಳನ್ನು ಅವಲೋಕಿಸಲು ಹಾಗೂ ಮೀನುಗಾರರ ಸುರಕ್ಷತೆ ದೃಷ್ಟಿಯಿಂದ ದ್ವಿಮುಖ ಸಂವಹನ ಸಂಪರ್ಕ ಸಾಧನ ಕಡ್ಡಾಯಗೊಳಿಸಲಾಗಿದೆ. ಆದರೆ ಈ ಸಾಧನದಲ್ಲಿರುವ ಬ್ಯಾಟರಿಗಳ ಚಾರ್ಜ್‌ ಖಾಲಿಯಾದಲ್ಲಿ ಬೋಟುಗಳಲ್ಲಿಯೇ ಸೋಲಾರ್‌ ಮೂಲಕ ಅವುಗಳನ್ನು ರಿಚಾರ್ಜ್‌ ಮಾಡಿಕೊಳ್ಳಲು ಸಾಧ್ಯವಾಗುವಂತಹ ಯತ್ನಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಉಪ್ಪು ನೀರಿನಲ್ಲಿ ಸೋಲಾರ್‌ ಪ್ಯಾನಲ್‌ಗಳು ಸೂಕ್ತವಾಗಿ ಕಾರ್ಯನಿರ್ವಹಿಸುವುದಿಲ್ಲ ಹಾಗೂ ಬಾಳಿಕೆಯೂ ಬರುವುದಿಲ್ಲ ಹಾಗಾಗಿ ಪರ್ಯಾಯ ಕ್ರಮಗಳನ್ನು ಪತ್ತೆ ಮಾಡಲು ಚಿಂತಿಸಲಾಗಿದೆ. ಬೋಟ್‌ಗಳ ಮೇಲೆ ಕವಚದಂತಹ ಸೋಲಾರ್‌ ಫಲಕಗಳನ್ನು ಅಳವಡಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಈ ಸಾಧನಗಳಲ್ಲಿಕಂಡು ಬಂದಿರುವ ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸಲು ತಜ್ಞರ ಸಮಿತಿ ರಚಿಸಿ ಅವುಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮೀನುಗಾರ ಸ್ನೇಹಿಯನ್ನಾಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮೀನುಗಾರರಿಗೆ ಡೀಸೆಲ್‌ ಸಬ್ಸಿಡಿ ಈಗಾಗಲೇ ನೀಡಲಾಗುತ್ತಿದೆ. ಅದನ್ನು 1.50 ಲಕ್ಷ ಕೆ.ಎಲ್‌ಗೆ ವಿಸ್ತರಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ದ್ವಿಮುಖ ಸಂವಹನ ಸಂಪರ್ಕ ಸಾಧನದಲ್ಲಿ ಕಂಡುಬಂದಿರುವ ದೋಷಗಳನ್ನು ಸರಿಪಡಿಸಲು ತಾಂತ್ರಿಕ ನಿಪುಣರ ಸಮಿತಿ ರಚಿಸಿ, ಆ ಸಮಿತಿಯು ಸಾಧಕ-ಬಾಧಕಗಳನ್ನು ಅರಿತು ಸಮಿತಿ ನೀಡುವ ಸಲಹೆಗಳ ಆಧಾರದಲ್ಲಿ ಸಾಧನದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ, ಮೀನುಗಾರಿಕಾ ಇಲಾಖೆಯ ನಿರ್ದೇಶಕರ ಮೂಲಕ ಅದನ್ನು ಫಲಾನುಭವಿಗಳಿಗೆ ಒದಗಿಸಲಾಗುವುದು ಎಂದರು.

ಶಾಸಕರಾದ ವೇದವ್ಯಾಸ ಕಾಮತ್‌, ಉಡುಪಿ ಶಾಸಕ ರಘುಪತಿ ಭಟ್‌, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್‌ ಕುಮಾರ್‌, ಕರಾವಳಿ ಕಾವಲು ಪಡೆಯ ಡಿಐಜಿ ವೆಂಕಟೇಶ್‌, ಮೀನುಗಾರಿಕಾ ಇಲಾಖೆಯ ನಿರ್ದೇಶಕ ರಾಮಾಚಾರ್ಯ, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್‌ ಕುಮಾರ್‌, ಉಡುಪಿ ಜಿಲ್ಲೆಯ ಜಂಟಿ ನಿರ್ದೇಶಕ ಗಣೇಶ್‌, ಮಲ್ಪೆ ಮೀನುಗಾರರ ಸಂಘ, ಟ್ರಾಲ್‌ ಬೋಟ್‌, ಪರ್ಸಿನ್‌ ಬೋಚ್‌ ಮೀನುಗಾರರ ಸಂಘ, ಆಳ ಸಮುದ್ರ ಮೀನುಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ : ಸಿಎಂ -Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago