Featured

ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟು ಮುಳುಗಡೆ : 7 ಮಂದಿ ಮೀನುಗಾರರ ರಕ್ಷಣೆ -Vishwanews24

ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟು ಮುಳುಗಡೆ : 7 ಮಂದಿ ಮೀನುಗಾರರ ರಕ್ಷಣೆ -Vishwanews24

ಉಡುಪಿ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟೊಂದು ಗೋವಾ ಮಹಾರಾಷ್ಟ್ರದ ಸಮೀಪದ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಿನ್ನೆ ನಡೆದಿದೆ. ಘಟನೆ ವೇಳೆ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಮಲ್ಪೆಯ ಹನುಮಾನ್ ನಗರದ ತಾರಾನಾಥ ಕುಂದರ್ ಎಂಬವರ `ಮಥುರಾ’ ಹೆಸರಿನ ಆಳಸಮುದ್ರ ಮೀನುಗಾರಿಕಾ ಬೋಟು ನ.17ರಂದು ಮಲ್ಪೆ ಬಂದರಿನಿoದ ಮೀನುಗಾರಿಕೆಗೆ ತೆರಳಿತ್ತು. ಈ ವೇಳೆ ಗೋವಾ-ಮಹಾರಾಷ್ಟ್ರ ಮಧ್ಯೆ ಸುಮಾರು 22 ಮಾರು ಆಳ ದೂರ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನ ತಳಭಾಗಕ್ಕೆ ವಸ್ತುವೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದ್ದು, ಇದರಿಂದ ಬೋಟಿನ ಹಲ್ ಒಡೆದು ಸ್ಟೋರೇಜ್ ಮೂಲಕ ಬೋಟಿನ ಒಳಗೆ ಸಮುದ್ರದ ನೀರು ನುಗ್ಗಿದೆ. ಅಪಾಯವನ್ನರಿತ ಬೋಟ್‌ನಲ್ಲಿದ್ದ ಮೀನುಗಾರರು ಸಮೀಪದಲ್ಲಿದ್ದ `ಮಾಹೂರ್’ ಬೋಟಿನವರಿಗೆ ಮಾಹಿತಿ ನೀಡಿದರು. ಕೂಡಲೇ ಆಗಮಿಸಿದ ಮಾಹೂರ್ ಬೋಟಿನವರು, ಮುಳುಗಡೆಯಾಗುತ್ತಿದ್ದ ಬೋಟಿನಿಂದ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಇದೇ ವೇಳೆ ಬೋಟನ್ನು ಗೋವಾ ಬಂದರಿಗೆ ಎಳೆದು ತರುವ ಪ್ರಯತ್ನ ಮಾಡಿದರಾದರೂ ಬೋಟಿನೊಳಗೆ ಸಂಪೂರ್ಣ ನೀರು ನುಗ್ಗಿದ್ದರಿಂದ ತಡರಾತ್ರಿ ವೇಳೆ ಬೋಟು ಸಮುದ್ರ ಮಧ್ಯೆ ಮುಳುಗಡೆಯಾಗಿದೆ. ರಕ್ಷಿಸಲ್ಪಟ್ಟ ಮೀನುಗರರನ್ನು ಮಹೂರ್ ಬೋಟು ಮೂಲಕ ಮಲ್ಪೆ ಬಂದರಿಗೆ ಕರೆತರಲಾಗಿದೆ. ಮುಳುಗಡೆಯಾದ ಬೋಟಿನಲ್ಲಿದ್ದ ಬಲೆ, ಡಿಸೇಲ್, ಮೀನು ಸೇರಿದಂತೆ ಇತರ ವಸ್ತುಗಳು ಸಮುದ್ರ ಪಾಲಾಗಿದ್ದು, ಸುಮಾರು 65 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

40 minutes ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

58 minutes ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

1 hour ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

1 hour ago

ಎಂಆರ್‌ಪಿಎಲ್‌ ದುರಂತ: ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ -vishwanews24

ಎಂಆರ್‌ಪಿಎಲ್‌ ದುರಂತ: ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ , ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ ಮಂಗಳೂರು :ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ…

1 hour ago

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

15 hours ago