Featured

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಅಹ್ವಾನ – Vishwanews24

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಅಹ್ವಾನ

ಧಾರವಾಡ : ಮೀನುಗಾರಿಕೆ ಇಲಾಖೆಯಿಂದ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃಧ್ಧಿಗಾಗಿ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಗಳು ಮತ್ತು ಪ್ರಧಾನ ಮಂತ್ರಿ ಮತ್ಸ್ಯ ಸಂಪದ (PMMSY) ಯೋಜನೆಗಳಡಿ ಅರ್ಹ ಫಲಾನುಭವಿಗಳಂದ ಅರ್ಜಿ ಅಹ್ವಾನಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಪ್ರಮುಖವಾಗಿ ಸಮುದಾಯ ಕೆರೆಗಳು, ಕೃಷಿ ಹೊಂಡ, ತಡೆ ಅಣೆಕಟ್ಟು, ಗೋಕಟ್ಟೆ, ನಾಲಾಬದು, ಬೋರ್‍ವೆಲ್ ಆಧಾರಿತ ನೀರು ಸಂಗ್ರಹಣಾ ಕೊಳಗಳು, ನೀರಾವರಿ ಬಾವಿಗಳು ಹಾಗೂ ಪಾಂಡುಗಳು ಮುಂತಾದ ಜಲ ಸಂಪನ್ಮೂಲಗಳಿದ್ದಲ್ಲಿ ಮೀನು ಸಾಕಣೆ ಮಾಡುವುದೇ ಒಳನಾಡು ಮೀನುಕೃಷಿ ಆಗಿದೆ.

ಜೂ.24ರ ಪೇಟೆ ಧಾರಣೆ: ಮೀನು, ತರಕಾರಿ, ರಬ್ಬರ್ ಹಾಗೂ ರಸಗೊಬ್ಬರ ಮಾರುಕಟ್ಟೆ ಬೆಲೆ
ಈ ಸಂಪನ್ಮೂಲಗಳನ್ನು ಬಳಸಿಕೊಂಡು ಮೀನು ಸಾಕಣೆ ಅಥವಾ ಮೀನು ಕೃಷಿ ಮಾಡಿದರೆ ಗ್ರಾಮೀಣ ಮಟ್ಟದಲ್ಲಿ ಕಡಿಮೆ ಖರ್ಚಿನಲ್ಲಿ ಪೌಷ್ಠಿಕ ಆಹಾರ ದೊರೆತಂತೆ ಆಗುತ್ತದೆ. ರೈತರ ಆರ್ಥಿಕ ಅಭಿವೃದ್ಧಿಗೂ ಸಹ ಸಹಕಾರಿಯಾಗುತ್ತದೆ. ಈಗ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃಧ್ಧಿಗಾಗಿ ಮೀನುಗಾರಿಕೆ ಇಲಾಖೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಮಾಡಿದೆ. ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ…

ಜಿಲ್ಲಾ ವಲಯ ಯೋಜನೆಗಳು

ಕೆರೆಗಳು ಮತ್ತು ಜಲಾಶಯದ ವ್ಯಾಪ್ತಿಯ ವೃತ್ತಿಪರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀನುಗಾರರು, ಮೀನು ಕೃಷಿಕರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿಗೆ ಸಹಾಯಧನ (ಸೇವಾ ಸಿಂಧು ಪೋರ್ಟಲ್ ಮೂಲಕ) ಮತ್ತು ಸ್ವಂತ ಜಮೀನಿನಲ್ಲಿ ಮೀನು ಕೃಷಿ ಕೊಳ ನಿರ್ಮಾಣಕ್ಕೆ ಸಹಾಯಧನ, ಹುಲ್ಲುಗೆಂಡೆ ಮೀನುಮರಿ ಖರೀದಿಗೆ ಸಹಾಯಧನ ಹಾಗೂ ಮೀನು ಮಾರಾಟದಲ್ಲಿ ತೊಡಗಿರುವ ಮೀನುಗಾರರಿಗೆ ದ್ವೀಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲಾಗುವುದು.

ರಾಜ್ಯ ವಲಯ ಯೋಜನೆಗಳು

ಕೆರೆಗಳು ಮತ್ತು ಜಲಾಶಯದ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿಗೆ ಸಹಾಯಧನ (ಸೇವಾ ಸಿಂಧು ಪೋರ್ಟಲ್ ಮೂಲಕ) ಹಾಗೂ ಮೀನುಮರಿ ಖರೀದಿಸಲು ನೆರವು ಯೋಜನೆ, ಕೆರೆ, ಜಲಾಶಯಗಳ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ನೆರೆವು, ಕೆರೆಯನ್ನು ಗುತ್ತಿಗೆ ಪಡೆದ ಮೀನುಗಾರಿಕೆ ಸಹಕಾರಿ ಸಂಘಗಳಿಗೆ ಮೀನುಮರಿ ಬಿತ್ತನೆಗೆ ನೆರವಿಗೆ ಸಹಾಯಧನ ನೀಡಲಾಗುವುದು.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ (PMMSY) ಯೋಜನೆ

ಬಯೋಫ್ಲಾಕ್ ಮೀನು ಕೃಷಿಕೊಳ ನಿರ್ಮಾಣ, ಮಧ್ಯಮ ಗಾತ್ರದ ಆರ್.ಎ.ಎಸ್. ಘಟಕ ನಿರ್ಮಾಣ, ಬ್ಯಾಕ್ ಯಾರ್ಡ ಆರ್.ಎ.ಎಸ್. ಘಟಕ ನಿರ್ಮಾಣ, ಸಣ್ಣ ಬಯೋಫ್ಲಾಕ್ ಮೀನುಕೊಳ ನಿರ್ಮಾಣದ ಯೋಜನೆಗಳಿದ್ದು ಸಾಮಾನ್ಯ ವರ್ಗದವರಿಗೆ ಶೇ.40 ಹಾಗೂ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.

ಜುಲೈ 15ರ ಒಳಗೆ ಅರ್ಜಿ ಸಲ್ಲಿಸಿ

ಆಸಕ್ತರು ಜುಲೈ 15 ರೊಳಗಾಗಿ ತಾಲೂಕಾ ಅಧಿಕಾರಿಗಳ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆ ದೂರವಾಣಿ 0836-2447416, 9845453065 8880483957, 7411278429 ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

16 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

1 hour ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago