ಉಡುಪಿ: ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಖಾತೆಯ ಸಚಿವರಾಗಿ ಕರಾವಳಿ ಭಾಗದ ಕೋಟ ಶ್ರೀನಿವಾಸ ಪೂಜಾರಿಯರ ಆಯ್ಕೆ ಮಾಡಿದ ರಾಜ್ಯ ಸರಕಾರದ ನಡೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ಮೀನುಗಾರಿಕೆಯ ಬಗ್ಗೆ ಮಾಹಿತಿಯಿರುವ ಕರಾವಳಿಯ ಭಾಗದವರನ್ನೇ ಈ ಖಾತೆಯ ಸಚಿರನ್ನಾಗಿಸಬೇಕೆಂಬ ಕರಾವಳಿ ಭಾಗದ ಮೀನುಗಾರರ ಬಹುದಿನದ ಬೇಡಿಕೆಯನ್ನು ಪರಿಗಣಿಸಿ ಈ ಬಾರಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ನೇಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.ಯಡಿಯೂರಪ್ಪ ರವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಈ ಹಿಂದೆ ಮೀನುಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಮೀನುಗಾರಿಕೆಯ ಸಮಸ್ಯೆಗಳ ಬಗ್ಗೆ ತೀರ ಹತ್ತಿರದಿಂದ ಬಲ್ಲವರಾಗಿದ್ದು, ಮೀನುಗಾರಿಕೆಯ ಸಮಗ್ರ ಅಭಿವೃದ್ಧಿ ಬಗ್ಗೆ ಮೀನುಗಾರ ವಲಯ ಅಪಾರ ನಿರೀಕ್ಷೆ ಹೊಂದಿದೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…