Featured

ಮೀನುಗಾರಿಕೆ ಯೋಜನೆಗಳ  ಶೀಘ್ರ ಅನುಷ್ಠಾನದ ಬಗ್ಗೆ ಕೇಂದ್ರ ಮೀನುಗಾರಿಕೆ ಸಚಿವ ಪರ್ಶೋತ್ತಮ್ ರೂಪಾಲ ರವರಿಗೆ ಮನವಿ : ಯಶ್ ಪಾಲ್ ಸುವರ್ಣ – VIshwanews24

ಮೀನುಗಾರಿಕೆ ಯೋಜನೆಗಳ  ಶೀಘ್ರ ಅನುಷ್ಠಾನದ ಬಗ್ಗೆ ಕೇಂದ್ರ ಮೀನುಗಾರಿಕೆ ಸಚಿವ ಪರ್ಶೋತ್ತಮ್ ರೂಪಾಲ ರವರಿಗೆ ಮನವಿ : ಯಶ್ ಪಾಲ್ ಸುವರ್ಣ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಆತ್ಮ ನಿರ್ಭರ ಭಾರತ ಪ್ಯಾಕೇಜ್ ಮೂಲಕ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರಿಕೆ ಅಭಿವೃದ್ಧಿಗೆ ಮೀಸಲಿಟ್ಟ 20,000 ಕೋಟಿ ಅನುದಾನದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ   ಯೋಜನೆಯನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕೇಂದ್ರ ಮೀನುಗಾರಿಕೆ ಇಲಾಖೆಯ ವತಿಯಿಂದ ದೇಶದ ಕರಾವಳಿ ರಾಜ್ಯಗಳ ಬಂದರುಗಳಿಗೆ ಭೇಟಿ ನೀಡಿ, ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗುಜರಾತ್ ಕಛ್ ಜಿಲ್ಲೆಯ ಮಾಂಡವಿ ಬಂದರಿನಲ್ಲಿ ಆಯೋಜಿಸಿದ್ದ ಸಾಗರ ಪರಿಕ್ರಮ ಜಲ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಸಚಿವರಾದ  ಶ್ರೀ ಪರ್ಶೋತ್ತಮ್ ರೂಪಾಲ ರವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಭೇಟಿಯಾಗಿ ಮನವಿ ಸಲ್ಲಿಸಿದರು.
ಸಾಗರ್ ಪರಿಕ್ರಮ ಜಲಯಾತ್ರೆಯಲ್ಲಿ  ಮೀನುಗಾರಿಕೆ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಬೋಟ್ ಮೂಲಕ ತೆರಳಿ ವಿವಿಧ ರಾಜ್ಯಗಳ ಬಂದರುಗಳಿಗೆ ಭೇಟಿ ನೀಡಿ ಮೀನುಗಾರರೊಂದಿಗೆ ಸಮಾಲೋಚನೆ ನಡೆಸುವ ವಿನೂತನ ಕಾರ್ಯಕ್ರಮವನ್ನು ಇಲಾಖೆ ಈ ಮೂಲಕ ರೂಪಿಸಿದೆ.
ಮೀನುಗಾರಿಕೆ ದೋಣಿಗಳ ಡೀಸೆಲ್ ಮೇಲಿನ ರೋಡ್ ಸೆಸ್ ವಿನಾಯಿತಿ,  ನಾಡದೋಣಿ ಮೀನುಗಾರಿಕೆ ಸೀಮೆಎಣ್ಣೆ ಸಮರ್ಪಕ ಪೂರೈಕೆ ಹಾಗೂ ಸೀಮೆ ಎಣ್ಣೆ ಇಂಜಿನ್ ಬಳಕೆಗೆ ಪರ್ಯಾಯವಾಗಿ ಎಲೆಕ್ಟ್ರಿಕಲ್ ಇಂಜಿನ್ ತಂತ್ರಜ್ಞಾನದ ಬಳಕೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಬ್ಸಿಡಿ, ಬಂದರುಗಳ ಹೂಳೆತ್ತಲು ರಾಜ್ಯ ಸರಕಾರಗಳಿಗೆ ಡ್ರೆಜ್ಜರ್ ಯಂತ್ರ  ಖರೀದಿಗೆ ಕೇಂದ್ರ ಸರಕಾರದ ಅನುದಾನ, ಮೀನುಗಾರಿಕೆ ದೋಣಿಗಳ  ವಿಮೆಯ ನಿಯಮಾವಳಿಗಳ ಸರಳೀಕರಣಗೊಳಿಸಿ ಅವಘಡಕ್ಕೀಡಾದ ದೋಣಿಗಳ ವಿಮಾ ಪರಿಹಾರ ಮೊತ್ತ  ಶೀಘ್ರ ಪಾವತಿಗೆ ಕ್ರಮ, ಗರಿಷ್ಠ ಸಂಖ್ಯೆಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್  ವಿತರಣೆಗೆ ಕ್ರಮ, ಕೃಷಿ ಇಲಾಖೆಯ ಸಾಲ ಯೋಜನೆ ಹಾಗೂ ಬೆಂಬಲ ಬೆಲೆ ಮಾದರಿಯಲ್ಲಿ ಮೀನುಗಾರಿಕೆಗೂ ಶೂನ್ಯ ಬಡ್ಡಿದರದ ಸಾಲ ಹಾಗೂ ಪೂರಕ ಯೋಜನೆ, ತುರ್ತು ಸಂದರ್ಭಗಳಲ್ಲಿನ ಅವಶ್ಯಕತೆಗೆ ಸೀ ಆಂಬ್ಯುಲೆನ್ಸ್ ವ್ಯವಸ್ಥೆ, ಕುಳಾಯಿ  ಮತ್ತು ಹೆಜಮಾಡಿ ಮೀನುಗಾರಿಕೆ ಬಂದರು ಕಾಮಗಾರಿಗೆ ವೇಗ ಹಾಗೂ ಕಾಪುವಿನಲ್ಲಿ ನಾಡ ದೋಣಿಗಳ ಜೆಟ್ಟಿ ನಿರ್ಮಾಣ ಸಹಿತ ಹಲವು ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಆದ್ಯತೆಯ ಮೇರೆಗೆ ಯೋಜನೆ ರೂಪಿಸುವ ಭರವಸೆ ನೀಡಿರುವುದಾಗಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago