Featured

ಮೀನುಗಾರ ಮಹಿಳೆಯರಿಂದ ಸಾಲ ಮರುಪಾವತಿಗೆ ಒತ್ತಾಯಿಸದಂತೆ ಬ್ಯಾಂಕ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ -Vishwanews24

ಉಡುಪಿ: ಸಾಲಮನ್ನಾ ಫಲಾನುಭವಿ ಮೀನುಗಾರ ಮಹಿಳೆಯರಿಂದ ಸಾಲ ಮರುಪಾವತಿಗೆ ಒತ್ತಾಯಿಸದಂತೆ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಸೂಚಿಸಲಾಗಿದ್ದು, ಬ್ಯಾಂಕ್ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ನೀಡಿದ್ದಾರೆ.

ಮೀನುಗಾರ ಮಹಿಳೆಯರು ಈ ಬಗ್ಗೆ ಆತಂಕ, ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮೀನುಗಾರ ಮಹಿಳೆಯರ ಹಿತಾಸಕ್ತಿ ಗಮನದಲ್ಲಿರಿಸಿ ರಾಜ್ಯ ಸರ್ಕಾರ, ಶಾಸಕರ ಮನವಿ ಮೇರೆಗೆ ಕರಾವಳಿ ಮೂರು ಜಿಲ್ಲೆಯ 23 ಸಾವಿರ ಮಹಿಳಾ ಮೀನುಗಾರರ 62 ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿತ್ತು. ಅದರ ಪ್ರಕ್ರಿಯೆ ನಡೆಯುತ್ತಿದೆ.

ಈ ನಡುವೆ ರಾಷ್ಟ್ರೀಕೃತ ಬ್ಯಾಂಕ್‌ಗಳು ಮಹಿಳೆಯರು ಸಾಲ ಪಾವತಿಸಬೇಕೆಂದು ಒತ್ತಾಯಿಸಿದ್ದು, ಕಟ್ಟದಿದ್ದರೆ ಸುಸ್ತಿ ಸಾಲಗಾರರಾಗುತ್ತೀರಿ. ಮುಂದೆ ಯಾವ ಸಾಲ ಸಿಗುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಈ ಹಿಂದೆ ಸಾಲ ಮರುಪಾವತಿಸಲು ಒತ್ತಡ ಹಾಕದಂತೆ ಬ್ಯಾಂಕ್‌ಗಳಿಗೆ ಸರ್ಕಾರ ಸೂಚಿಸಿದ್ದರೂ ಮತ್ತೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಗುರುವಾರ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಸಾಲಮನ್ನಾ ಪ್ರಕ್ರಿಯೆ ಸರ್ಕಾರದ ಹಂತದಲ್ಲಿ ನಡೆಯುತ್ತಿದೆ, ಇದಕ್ಕೆ ಕೆಲ ಸಮಯ ಬೇಕಾಗಿದ್ದು, ಶೀಘ್ರ ಸಾಲಮನ್ನಾ ಆಗಲಿದೆ ಎಂದರು.

 

Vishwa News 24

Recent Posts

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

1 minute ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

17 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

26 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

38 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

2 hours ago