Featured

ಮುಂಗಾರಿನ ಅಬ್ಬರಕ್ಕೆ ಮಹಾರಾಷ್ಟ್ರ ತತ್ತರ , ಜನಜೀವನ ಅಸ್ತವ್ಯಸ್ಥ – Vishwanews24

ಮುಂಗಾರಿನ ಅಬ್ಬರಕ್ಕೆ ಮುಂಬೈ ಮಹಾರಾಷ್ಟ್ರ ತತ್ತರ – Vishwanews24

ಮುಂಬೈ, :  ಕರ್ನಾಟಕ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಮಾನ ಇಲಾಖೆ ಶುಕ್ರವಾರದ ತನಕ ಭಾರೀ ಮಳೆ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದ ಮುಂಬೈ ಮತ್ತು ಥಾಣೆ ನಗರಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಬೆಳಗ್ಗೆ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಾನ್ಸೂನ್ ಮಳೆ ಪರಿಣಾಮ: ಭಾರತದಲ್ಲಿ ಉದ್ಯೋಗ ದರ ಕುಸಿತ ಬಾಂದ್ರಾ ಪ್ರದೇಶದ ವಿಡಿಯೋವೊಂದನ್ನು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದಕ್ಕೆ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಆರಿದ್ರಾ ಮಳೆ ಅಬ್ಬರಕ್ಕೆ ಕೊಡಗು ತಲ್ಲಣ, ಭೂಕುಸಿತದ ಆತಂಕ ಸೋಮವಾರದಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಮಳೆ ಜೋರಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಜ್ಜಾಗಿರಬೇಕು ಎಂದು ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ಮಂಗಳವಾರ ಬೆಳಗ್ಗೆ 8.30ರ ವರದಿಯಂತೆ ಮುಂಬೈ ನಗರದಲ್ಲಿ 24 ಗಂಟೆಯಲ್ಲಿ 95.81 ಮಿ. ಮೀ. ಮಳೆಯಾಗಿತ್ತು. ಮಳೆಯಿಂದಾಗಿ ಮುಂಬೈ ನಗರದ ಜೀವನಾಡಿ ರೈಲುಗಳ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಮುಂಬೈ ನಗರದ ಮಳೆ ವಿಡಿಯೋ ಥಾಣೆಯಲ್ಲಿಯೂ ಸಹ ಸೋಮವಾರದಿಂದ ಮಳೆಯಾಗುತ್ತಲೇ ಇದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಮುಂಬೈ ಮತ್ತು ಥಾಣೆ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago