ಮಂಗಳೂರು/ಉಡುಪಿ: ಮೆಕುನು ಚಂಡಮಾರುತದ ಪ್ರಭಾವ ತಗ್ಗಿದ ಬೆನ್ನಲ್ಲೇ ಮಂಗಳವಾರ ಕರಾವಳಿಗೆ ಅಬ್ಬರಿಸಿ ಕಾಲಿಟ್ಟ ಮುಂಗಾರು ಮಾರುತಕ್ಕೆ ಅವಿಭಜಿತ ಜಿಲ್ಲೆ ಅಕ್ಷರಶಃ ಬೆಚ್ಚಿದ್ದು,ಇಡೀ ಮಂಗಳೂರು ನಗರ ಮುಳುಗೆದ್ದಿದೆ. ಭಾರಿ ಮಳೆ ಜತೆಗೆ ಉಡುಪಿಯಲ್ಲಿ ಬಿರುಗಾಳಿ ಆರ್ಭಟದಿಂದಾಗಿ ಅಪಾರ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರತ್ಯೇಕ ಮಳೆ ಸಂಬಂಧಿ ಅವಘಡಗಳಲ್ಲಿ ಮೂವರು ಜೀವಬಿಟ್ಟಿದ್ದಾರೆ.
ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಪೂರ್ವ ಮುಂಗಾರು ಚುರುಕುಗೊಂಡಿದ್ದರೂ ಸೋಮವಾರ ರಾತ್ರಿ ಬಳಿಕದ ಚಿತ್ರಣ ಮಳೆಯ ರೌದ್ರ ಸ್ವರೂಪ ನೆನಪಿಸಿದೆ. ಎರಡೂ ಜಿಲ್ಲೆಗಳ ಕರಾವಳಿ ಭಾಗದಲ್ಲಿ ಕುಂಭದ್ರೋಣ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಮತ್ತು ನಗರ ಪ್ರದೇಶದ ಪ್ರಮುಖ ರಸ್ತೆಗಳ ಸಹಿತ ತಗ್ಗುಪ್ರದೇಶ ಜಲಾವೃತಗೊಂಡಿದೆ. ಮಂಗಳೂರಿನಲ್ಲಿ ಮಂಗಳ ವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಂಡ ಮಳೆ ಸಾಯಂಕಾಲ ದವರೆಗೂ ಧಾರಾಕಾರವಾಗಿ ಸುರಿದಿದೆ.
ಕರ್ನಾಟಕದ ಹಲವೆಡೆ ಮಳೆಯಿಂದ ತೊಂದರೆಗೆ ಈಡಾಗಿರುವವರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ. ಹಾನಿಗೀಡಾದ ಪ್ರದೇಶಕ್ಕೆ ನೆರವು ನೀಡುವ ಕುರಿತು ಅಧಿಕಾರಿಗಳೊಂದಿಗೆ ರ್ಚಚಿಸಿದ್ದೇನೆ.
ಪ್ರಧಾನಿ ಮೋದಿ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…