ತುಪ್ಪ ತಿಂದರೆ ಯಾವೆಲ್ಲಾ ರೋಗವನ್ನು ನಿವಾರಿಸಬಹುದು ಎನ್ನುವ ವಿವರಣೆಯನ್ನು ನೀಡಲಾಗಿದೆ. ಹೌದು, ತುಪ್ಪ ಎಂದರೆ ಅದು ಕೇವಲ ಕೊಬ್ಬಿನ ಪದಾರ್ಥ ಎನ್ನುವುದಕ್ಕೆ ಸೀಮಿತವಾಗಿಲ್ಲ. ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು.
ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಆದರೆ ಇದು ಸತ್ಯ. ತುಪ್ಪದ ಸೇವನೆಯಿಂದ ಯಾವೆಲ್ಲಾ ಸಮಸ್ಯೆಗಳಿಂದ ದೂರ ಇರಬಹುದು ಎನ್ನುವುದನ್ನು ತಿಳಿದುಕೊಳ್ಳಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ…
ಜೀವಕೋಶದ ಚಟುವಟಿಕೆ ಹೆಚ್ಚುವುದು:
ಜೀವಕೋಶದ ಚಟುವಟಿಕೆ ಹೆಚ್ಚುವುದು ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು. ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು. ಅಲ್ಲದೆ ದೇಹಕ್ಕೆ ಉತ್ತಮವಾದ ಆರೈಕೆಯನ್ನು ನೀಡುವುದು.
ಚರ್ಮದ ಕಾಂತಿ ಹೆಚ್ಚುವುದು:
ಚರ್ಮದ ಕಾಂತಿ ಹೆಚ್ಚುವುದು ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ. ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ. ಸೋರಿಯಾಸಿಸ್‍ನಂತಹ ಚರ್ಮ ರೋಗಗಳನ್ನು ಇದು ತಡೆಯುವುದು.
ಸಂಧಿವಾತವನ್ನು ತಡೆಯುತ್ತದೆ:
ಸಂಧಿವಾತವನ್ನು ತಡೆಯುತ್ತದೆ ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು. ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು. ತುಪ್ಪದ ಸೇವನೆಯಿಂದ ಆಸ್ಟಿಯೊಪೊರೋಸಿಸ್ ಸೇರಿದಂತೆ ಅನೇಕ ಮೂಳೆ ಸಮಸ್ಯೆಗಳನ್ನು ನಿವಾರಿಸುತ್ತದೆ.
ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:
ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ. ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.
ತೂಕ ಇಳಿಸುವುದು:
ತೂಕ ಇಳಿಸುವುದು ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ. ಅಲ್ಲದೆ ಗಣನೀಯವಾದ ತೂಕ ಇಳಿಕೆಯನ್ನು ನೀವು ನಿರೀಕ್ಷಿಸಬಹುದು.
ಕೂದಲು ಉದುರುವಿಕೆಯನ್ನು ತಡೆಯುತ್ತದೆ:
ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ. ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ. ಇದರಿಂದ ಹೊಳಪಿನಿಂದ ಕೂಡಿರುವ ದಟ್ಟವಾದ ಕೂದಲನ್ನು ನೀವು ಹೊಂದಬಹುದು.
ಲ್ಯಾಕ್ಟೋಸ್‍ಗಳನ್ನು ಸುಧಾರಿಸುತ್ತದೆ:
ಲ್ಯಾಕ್ಟೋಸ್‍ಗಳನ್ನು ಸುಧಾರಿಸುತ್ತದೆ ಕೆಲವರಿಗೆ ಹಾಲು ಅಥವಾ ಹಾಲಿನಿಂದ ತಯಾರಿಸಿರುವ ಉತ್ಪನ್ನಗಳನ್ನು ಸೇವಿಸದಾಗ ಸೂಕ್ತ ರೀತಿಯ ಜೀರ್ಣಕ್ರಿಯೆ ಉಂಟಾಗುವುದಿಲ್ಲ. ಅದೇ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸ್ವೀಕರಿಸಿದರೆ ಲ್ಯಾಕ್ಟೋಸ್ ಸಮಸ್ಯೆಯು ಸುಧಾರಣೆ ಕಾಣುತ್ತದೆ. ಜೀರ್ಣ ಕ್ರಿಯೆಯೂ ಉತ್ತಮವಾಗಿ ನೆರವೇರುವುದು
ಕ್ಯಾನ್ಸರ್ ನಿಂದ ದೂರ ಇಡುವುದು:
ಕ್ಯಾನ್ಸರ್ ನಿಂದ ದೂರ ಇಡುವುದು ನೈಸರ್ಗಿಕವಾದ ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅನೇಕ ಬಗೆಯ ಕ್ಯಾನ್ಸರ್ ಕಾಯಿಲೆಯಿಂದ ದೂರ ಇರಬಹುದು. ಆಯುರ್ವೇದದ ಪ್ರಕಾರ ತುಪ್ಪ ಕ್ಯಾನ್ಸರ್ ವಿರೋಧಿ ಲಕ್ಷಣವನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ. ತುಪ್ಪದ ಇನ್ನಷ್ಟು ಪ್ರಯೋಜನಗಳನ್ನು ತಿಳಿಯಿರಿ…
ದೇಹದ ತೇವಕಾರಕ ಎಣ್ಣೆ:
ದೇಹದ ತೇವಕಾರಕ ಎಣ್ಣೆಯಾಗಿ ಒಂದು ವೇಳೆ ನಿಮ್ಮ ಚರ್ಮ ವಿಪರೀತ ಒಣದಾಗಿದ್ದರೆ ಈ ವಿಧಾನವನ್ನು ಅನುಸರಿಸಿ: ಎರಡು ದೊಡ್ಡ ಚಮಚ ಅಪ್ಪಟ ತುಪ್ಪವನ್ನು ಕರಗುವಷ್ಟು ಬಿಸಿಮಾಡಿ. ಬಳಿಕ ಉಗುರುಬೆಚ್ಚನೆಯ ತಾಪಮಾನಕ್ಕೆ ಬರುವಷ್ಟು ತಣಿಸಿ. ಬಳಿಕ ಈ ತುಪ್ಪವನ್ನು ತೆಳುವಾಗಿ ಒಣಚರ್ಮದ ಮೇಲೆಲ್ಲಾ ನಯವಾಗಿ ಮಸಾಜ್ ಮಾಡುತ್ತಾ ಸವರಿಕೊಳ್ಳಿ. ಸುಮಾರು ಒಂದು ಘಂಟೆ ಬಿಟ್ಟು ಸ್ನಾನ ಮಾಡಿ.
ಮುಖದ ಕಾಂತಿಗೆ:
ಮುಖದ ಕಾಂತಿಗೆ ಒಂದು ದೊಡ್ಡ ಚಮಚ ಕಡ್ಲೆಹಿಟ್ಟು, ಒಂದು ದೊಡ್ಡ ಚಮಚ ಅಪ್ಪಟ ತುಪ್ಪ ಹಾಗೂ ಅಗತ್ಯವಿರುವಷ್ಟು ನೀರು ಬೆರೆಸಿ ಚೆನ್ನಾಗಿ ಬೆರೆಸಿ ಲೇಪನ ತಯಾರಿಸಿ. ಈ ಲೇಪನವನ್ನು ಈಗ ತಾನೇ ತಣ್ಣೀರಿನಿಂದ ತೊಳೆದುಕೊಂಡ ಮುಖಕ್ಕೆ ತೆಳುವಾಗಿ ಹಚ್ಚಿಕೊಳ್ಳಿ. ಇದನ್ನು ಪೂರ್ಣವಾಗಿ ಒಣಗಲು ಬಿಡಿ. ಒಣಗಿದ ಬಳಿಕ ಈ ಲೇಪನ ಬಿರಿಬಿಡಲು ಪ್ರಾರಂಭಿಸುತ್ತದೆ. ಈಗ ಕೇವಲ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಬಳಸಬೇಡಿ.
ಬಾಡಿ ಲೋಷನ್ ರೂಪದಲ್ಲಿ:
ಬಾಡಿ ಲೋಷನ್ ರೂಪದಲ್ಲಿ ದೇಹದ ತ್ವಚೆಯನ್ನು ಇಡಿಯ ದಿನ ಕೋಮಲ ಮತ್ತು ಮೃದುವಾಗಿಸಲು ತುಪ್ಪವೂ ಸಮರ್ಥವಾಗಿದೆ. ಇದಕ್ಕಾಗಿ ಸಮಪ್ರಮಾಣದಲ್ಲಿ ತುಪ್ಪ ಮತ್ತು ಕೊಬ್ಬರಿ ಎಣ್ಣೆಯನ್ನು ಬೆರೆಸಿ ಕೊಂಚ ಲ್ಯಾವೆಂಡರ್ ಎಣ್ಣೆಯ ಹನಿಗಳನ್ನು ಸೇರಿಸಿ ನಯವಾದ ಲೇಪನ ತಯಾರಿಸಿ. ಸ್ನಾನದ ಬಳಿಕ ಈ ಲೇಪನವನ್ನು ತೆಳುವಾಗಿ ಕೊಂಚ ಮಸಾಜ್ ಮೂಲಕ ಸೂಕ್ಷ್ಮಭಾಗಗಳನ್ನು ಬಿಟ್ಟು ಉಳಿದೆಲ್ಲಾ ಭಾಗಗಳಿಗೆ ಹಚ್ಚಿಕೊಳ್ಳಿ.
ಕೊಲೆಸ್ಟ್ರಾಲ್ ತಗ್ಗಿಸುತ್ತದೆ:
ಕೆಟ್ಟ ಕೊಲೆಸ್ಟ್ರಾಲ್ ತಗ್ಗಿಸುತ್ತದೆ ಉತ್ತರ ಭಾರತದಲ್ಲಿ ಹೃದಯಸಂಬಂಧಿ ಕಾಯಿಲೆಗಳು ಇತರ ಭಾಗಗಳಿಗೆ ಹೋಲಿಸಿದರೆ ಕಡಿಮೆ ಇದೆ. ಇದರ ಮೂಲ ಕಾರಣವೇನೆಂದರೆ ಉತ್ತರ ಭಾರತದ ಜನರು ಎಣ್ಣೆಗೆ ಬದಲಾಗಿ ಹೆಚ್ಚಾಗಿ ತುಪ್ಪವನ್ನೇ ಸೇವಿಸುತ್ತಾರೆ. ಈ ಅಭ್ಯಾಸದಿಂದ ದೇಹದ ರಕ್ತನಾಳಗಳ ಒಳಗೆ ಸಂಗ್ರಹಗೊಂಡಿದ್ದ ಕೆಟ್ಟಕೊಲೆಸ್ಟ್ರಾಲ್ ( LDL (low-density lipoprotein)) ಸಡಿಲಗೊಂಡು ನಿವಾರಣೆಯಾಗಲು ಸಾಧ್ಯವಾಗುತ್ತದೆ. ಇದು ಹೃದಯದ ಮೇಲಿನ ಹೊರೆಯನ್ನು ತಗ್ಗಿಸಿ ಹೃದಯ ಸಂಬಂಧಿ ತೊಂದರೆಗಳ ಸಾಧ್ಯತೆಯನ್ನು ಅಪಾರವಾಗಿ ಕಡಿಮೆಗೊಳಿಸುತ್ತದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…