ಮುಂಡ್ಕೂರು: ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಅವರು (60) ಫೆಬ್ರವರಿ 15 ರಂದು ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಾಸರಗೋಡಿನಲ್ಲಿ ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು.
ಮುಂಡ್ಕೂರಿನ ಜಾರಿಗೆ ಕಟ್ಟೆಯಲ್ಲಿ ಕೊರಗಜ್ಜ, ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರದಲ್ಲಿ ನಿರಂತರ ಕೋಲ, ಅಗೇಲು ಸೇವೆಗಳು ನಡೆಯುತ್ತಿದ್ದವು.
ಕ್ಷೇತ್ರದಲ್ಲಿ ಕ್ರೈಸ್ತ, ಮುಸ್ಲಿಂ ಸಮಾಜದ ಬಂಧುಗಳೂ ಹರಕೆಯ ಕೋಲ ಹಾಗೂ ಅಗೇಲು ಸೇವೆ ನೀಡುತ್ತಿದ್ದು, ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರ ಕಾರಣಿಕ ಕ್ಷೇತ್ರವೆನಿಸಿತ್ತು.
ಮೃತರು ಮುಂಡ್ಕೂರು ಪೊಸ್ರಾಲು ಬ್ರಹ್ಮ ಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷರಾಗಿದ್ದು, ಇತ್ತೀಚೆಗೆ ಸಂಘದ ನೂತನ ಕಟ್ಟಡ ನಿರ್ಮಾಣದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಮೃತರ ನಿಧನಕ್ಕೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಮುಂಬಯಿನ ಉದ್ಯಮಿ ಐಕಳ ಗಣೇಶ್ ಶೆಟ್ಟಿ, ಕಂಬಳ ಕ್ಷೇತ್ರದ ಬೋಳದಗುತ್ತು ಸತೀಶ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…