ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. : ಸಿದ್ದರಾಮಯ್ಯ -Vishwanews24
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. : ಸಿದ್ದರಾಮಯ್ಯ -Vishwanews24
ಮೈಸೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆರು ತಿಂಗಳ ಅಥವಾ ವರ್ಷ ಬಿಟ್ಟು ಅದರ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಈ ಮೂಲಕ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದರು.
ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಚಾಮರಾಜಪೇಟೆ, ಕೊಪ್ಪಳ, ಕೋಲಾರ ಭಾಗದಲ್ಲಿ ನಿಲ್ಲುವಂತೆ ಯಾರು ಒತ್ತಾಯ ಮಾಡಿಲ್ಲ. ಚುನಾವಣೆ ಇನ್ನೂ ದೂರ ಇದೆ. ಆದ್ದರಿಂದ ಈಗಲೇ ಮುಂದಿನ ಚುನಾವಣೆಯಲ್ಲಿ ನಿಲ್ಲಬೇಕೋ, ಬೇಡವೋ ಎಂಬುದನ್ನು ತೀರ್ಮಾನಿಸಿಲ್ಲ. ಮುಂದೇ ನೋಡೋಣ ಎಂದು ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರ್ಯಾಯ ನಾಯಕನ ಕೂಗು ಕೇಳಿಬರುತ್ತಿರುವ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಅದು ಒಳ್ಳೆಯ ಬೆಳವಣಿಗೆ, ನಾನೇನು ಶಾಶ್ವತ ಅಲ್ವಲ್ಲ.
ಪರ್ಯಾಯ ನಾಯಕ ಬೇಕಲ್ಲವೇ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರ್ತಿಲ್ಲ ನಿಜ. ನಾನು ಸೋತ ಬಳಿಕ ಕ್ಷೇತ್ರದಲ್ಲಿ ಸಭೆ ನಡೆಸಿಲ್ಲ, ಇದೇ ಮೊದಲು ಎಂದು ಹೇಳಿದರು..
