ಬಾಗಲಕೋಟೆ : ಮುಂದಿನ ಆರು ತಿಂಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭವಿಷ್ಯ ನುಡಿದಿದ್ದಾರೆ.
ಇಂದು ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ಯಡಿಯೂರಪ್ಪ ಹಿಟ್ಲರ್ ರೀತಿ ನಡೆದುಕೊಳ್ಳುತ್ತಿದ್ದಾರೆ. ನನಗೆ ಬಂದಿರೋ ಮಾಹಿತಿ ಪ್ರಕಾರ 40 ಜನ ಬಿಜೆಪಿ ಶಾಸಕರು ಅಸಮಧಾನಗೊಂಡಿದ್ದಾರೆ. ಖಂಡಿತವಾಗಿಯೂ ಆರು ತಿಂಗಳ ಮೇಲೆ ಬಿಜೆಪಿ ಸರ್ಕಾರ ಇರಲು ಸಾಧ್ಯವಿಲ್ಲ ಎಂದರು.
ಅಕ್ಟೋಬರ್ 24ರಂದು ಉಪಚುನಾವಣೆ ಫಲಿತಾಂಶ ಘೋಷಣೆಯಾಗಲಿದ್ದು, ಬಿಜೆಪಿ ಸರ್ಕಾರ ಉಳಿಸಿಕೊಳ್ಳಲು 8 ಸ್ಥಾನ ಗೆಲ್ಲಲೇಬೇಕಾಗಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ 14 ರಿಂದ 15 ಸ್ಥಾನ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ, ಆರು ತಿಂಗಳು ಬಿಡಿ ಉಪಚುನಾವಣೆ ಫಲಿತಾಂಶ ಬಂದ ಎರಡೇ ದಿನಕ್ಕೆ ಸರಕಾರ ಪತನವಾಗುತ್ತದೆ ಎಂಬುದಾಗಿ ಜಮೀರ್ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…