Featured

ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ : ಬಿ.ಎಸ್. ಯಡಿಯೂರಪ್ಪ -Vishwanews24

ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ : ಬಿ.ಎಸ್. ಯಡಿಯೂರಪ್ಪ -Vishwanews24

ಬೆಂಗಳೂರು: ‘ಮಿಷನ್ ಬೆಂಗಳೂರು- 2022’ ಅಡಿಯಲ್ಲಿ ಎಂಟು ಕ್ಷೇತ್ರಗಳಲ್ಲಿ ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಎರಡು ವರ್ಷಗಳಲ್ಲಿ ಬೆಂಗಳೂರಿನ ಸಂಪೂರ್ಣ ಚಹರೆ ಬದಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ‘ಮಿಷನ್ ಬೆಂಗಳೂರು- 2022’ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

ಸುಗಮ ಸಾರಿಗೆ, ಸ್ವಚ್ಛ ಪರಿಸರ, ವೈಜ್ಞಾನಿಕ ವಿಧಾನದಲ್ಲಿ ಘನ ತ್ಯಾಜ್ಯ ವಿಲೇವಾರಿ, ರಾಜ ಕಾಲುವೆಗಳ ಸಮಗ್ರ ನಿರ್ವಹಣೆ, ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು. ಹೊಸ ಉದ್ಯಾನಗಳು ಮತ್ತು ಬೃಹತ್ ವೃಕ್ಷೋದ್ಯಾನಗಳನ್ನೂ ನಿರ್ಮಿಸಲಾಗುವುದು ಎಂದು ಹೇಳಿದರು.

ನಗರದ ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಮತ್ತು ಎನ್ ಜಿಇಎಫ್ ಕಾರ್ಖಾನೆಗಳ ಜಮೀನಿನಲ್ಲಿ ಕಲೆ, ರಂಗಭೂಮಿಗೆ ಸಂಬಂಧಿಸಿದ ಮ್ಯೂಸಿಯಂ ನಿರ್ಮಿಸಲಾಗುವುದು. ಬೆಂಗಳೂರಿನ ಇತಿಹಾಸ ದಾಖಲಿಸುವ ಮ್ಯೂಸಿಯಂ ಕೂಡ ನಿರ್ಮಾಣವಾಗಲಿದೆ ಎಂದು ಪ್ರಕಟಿಸಿದರು.

ವಾಹನ ದಟ್ಟಣೆ ತಪ್ಪಿಸಲು ನಗರದ ಪ್ರಮುಖ 12 ಮಾರ್ಗಗಳನ್ನು ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲಾಗುವುದು. 400 ಕಿ. ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಸಂಚಾರ ದಟ್ಟಣೆ ವಾಯುವಾಲಿನ್ಯಕ್ಕೂ ಕಾರಣವಾಗಿದೆ. ಸದ್ಯ, ನಮ್ಮ ಮೆಟ್ರೋ 7 ಲಕ್ಷ ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದೆ. ಮುಂದಿನ ಎರಡು ವರ್ಷದಲ್ಲಿ ಹತ್ತು ಲಕ್ಷ ಪ್ರಯಾಣಿಕರಿಗೆ ಅನುಕೂಲ ಮಾಡಲಾಗುವುದು. ಸ್ವಚ್ಛ ಬೆಂಗಳೂರು ಅಡಿಯಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮಾಡಲಾಗ್ತಿದೆ. ನನ್ನ ಕಸ ನನ್ನ ಜವಾಬ್ದಾರಿ ಅನ್ನೋ ಅರಿವು ಮೂಡಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇದಲ್ಲದೆ, ಎರಡು ಬೃಹತ್ ವೃಕ್ಷೋಧ್ಯಾನಗಳ ನಿರ್ಮಾಣ ಮತ್ತು ಹಸಿರು ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಈಗಾಗಲೇ ಆಸ್ತಿ ನೋಂದಣಿಗೆ ಆನ್​ಲೈನ್​ ವ್ಯವಸ್ಥೆ ಮಾಡಲಾಗಿದೆ. ವಲಸಿಗರೇ ಹೆಚ್ಚಾಗಿರುವ ಹಿನ್ನೆಲೆ ನಮ್ಮ ಸಂಸ್ಕೃತಿ ಪರಿಚಿಸಲು ಕೆಲಸ ಮಾಡಲಾಗುವುದು. ಜೊತೆಗೆ, ಬೆಂಗಳೂರು ಒನ್ ಕೇಂದ್ರಗಳ ವ್ಯಾಪ್ತಿ ವಿಸ್ತರಣೆ ಮಾಡಲಾಗುವುದು. ಈ ಕಾರ್ಯಕ್ರಮಳೆಲ್ಲಾ ಎರಡು ವರ್ಷಗಳಲ್ಲಿ ಪೂರ್ತಿ ಆಗಬೇಕು. ಯಾವುದೇ ಕಾರಣಕ್ಕೂ ಹಣಕಾಸಿನ ತೊಂದರೆ ಆಗಬಾರದು ಎಂದು ತಿಳಿಸಿದ್ದಾರೆ.

ಉಪ‌ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ ನಾರಾಯಣ, ಸಚಿವರಾದ ಆರ್. ಅಶೋಕ, ಬೈರತಿ ಬಸವರಾಜ, ಕೆ. ಗೋಪಾಲಯ್ಯ, ಡಾ.ಕೆ.‌ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.‌ವಿಜಯ ಭಾಸ್ಕರ್ ಉಪಸ್ಥಿತರಿದ್ದರು.

 

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago