Featured

ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಪ್ಲಾಜಾ ಇರುವುದಿಲ್ಲ : ನಿತಿನ್ ಗಡ್ಕರಿ -Vishwanews24

ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಪ್ಲಾಜಾ ಇರುವುದಿಲ್ಲ : ನಿತಿನ್ ಗಡ್ಕರಿ -Vishwanews24

ನವದೆಹಲಿ,: “ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಪ್ಲಾಜಾ ಇರುವುದಿಲ್ಲ” ಎಂದು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಹೊಸ ಟೋಲ್ ಸಂಗ್ರಹ ವ್ಯವಸ್ಥೆಯ ರೂಪುರೇಷೆ ಅಂತಿಮಗೊಳಿಸಲಾಗಿದೆ. ರಷ್ಯಾ ಸರ್ಕಾರದ ಸಹಯೋಗದೊಂದಿಗೆ ಅದನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೊಸ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಬ್ಯಾಂಕ್ ಖಾತೆಯಿಂದ ನೇರವಾಗಿ ಹಣ ಸಂದಾಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ‘ಅಸೋಚಾಮ್ ಸಂಸ್ಥಾಪನಾ ವಾರ’ ಆಚರಣೆಯ ಸಂದರ್ಭ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ.

ಇತ್ತೀಚಿನ ಹೊಸ ಪ್ರಯಾಣಿಕ ಮತ್ತು ವಾಣಿಜ್ಯ ವಾಹನಗಳು ಜಿಪಿಎಸ್ ಒಳಗೊಂಡಿರುತ್ತವೆ. ಹಳೆಯ ವಾಹನಗಳಿಗೂ ಜಿಪಿಎಸ್ ಅಳವಡಿಸುವ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ರಷ್ಯಾ ಸರ್ಕಾರದ ಸಹಾಯದೊಂದಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತ ಪರೀಕ್ಷೆ ನಡೆಸಲಾಗಿದ್ದು ಯೋಜನೆ ಅಂತಿಮಗೊಳಿಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಭಾರತವು ಟೋಲ್ ಬೂತ್ ರಹಿತ ಹೆದ್ದಾರಿಗಳನ್ನು ಹೊಂದಲಿದೆ. ಜಿಪಿಎಸ್ ವ್ಯವಸ್ಥೆ ಮೂಲಕ ವಾಹನಗಳನ್ನು ಟ್ರ್ಯಾಕ್ ಮಾಡಲಾಗುವುದು. ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಬಾಕಿ ಟೋಲ್ ಹಣ ಸಂದಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬಂದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಐದು ವರ್ಷಗಳಲ್ಲಿ ₹1.34 ಲಕ್ಷ ಕೋಟಿ ಆದಾಯ ಸಂಗ್ರಹವಾಗಲಿದೆ ಎಂದು ಅವರು ತಿಳಿಸಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago