ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ಯಾರು ದೃತಿಗೇಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕುಂದಗೋಳ ಕ್ಷೇತ್ರದ ಅಭಿನಂದನಾ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಎಲ್ಲರು ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನ ಬಿಟ್ಟುಬಿಡಿ. ಇದರಲ್ಲಿ ಯಾವುದೇ ಸಂಶಯ ಬೇಡ. ಕೇಂದ್ರದ ಮಂತ್ರಿ ಪ್ರಹ್ಲಾದ್ ಜೋಶಿ ಕೊಡುಗೆ ಕುಂದಗೋಳ ಕ್ಷೇತ್ರಕ್ಕೆ ಜೀರೋ. ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲು ಹಲವು ಪ್ರಯತ್ನ ಮಾಡಿತ್ತು. 1 ವೋಟನಿಂದ ಗೆದ್ದರು ಗೆಲುವೆ 1 ಲಕ್ಷ ವೋಟನಿಂದ ಗೆದ್ದರು ಗೆಲುವೆ ಎಂದು ಅವರು ತಿಳಿಸಿದರು.
ಇನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನರು ಭಾವನಾತ್ಮಕವಾಗಿ ಮತಚಲಾಯಿಸಿದ್ದಾರೆ.
ಇವಿಎಂ ಮಷಿನ್ಗಳ ಬಗ್ಗೆ ಗೊಂದಲ ಇರುವುದು ನಿಜ. ಇವಿಎಂ ಮೋಸ ಆಗಿದೆಯೋ ಏನೋ ಗೊತ್ತಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಂಬರ್ 1 ಆಗಿದೆ ಎಂದು ಅವರು ನುಡಿದರು.
ಸದ್ಯ ಚುನಾವಣೆಯಲ್ಲಿ ಸೋಲು-ಗೆಲುವು ಇರುವುದು ಸಹಜ. ನನ್ನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ 12 ಸಾವಿರ ಮತಗಳು ಬಿದ್ದರೆ. ಲೋಕಸಭೆ ಚುನಾವಣೆಯಲ್ಲಿ 1 ಲಕ್ಷ 12 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿಗೆ ಬಿದ್ದಿವೆ. 1980ರಲ್ಲಿ ಬಿಜೆಪಿ ಕೇವಲ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈಗ 303 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇದು ಚುನಾವಣೆ ಸೋಲು-ಗೆಲುವು ಸಹಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…