Featured

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತೇ. ಇದರಲ್ಲಿ ಯಾವುದೇ ಅನುಮಾನ ಬೇಡ : ಸಿದ್ದರಾಮಯ್ಯ -Vishwanews24

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತೇ. ಇದರಲ್ಲಿ ಯಾವುದೇ ಅನುಮಾನ ಬೇಡ : ಸಿದ್ದರಾಮಯ್ಯ -Vishwanews24

ಬಾಗಲಕೋಟೆ: ಗ್ರಾಪಂ ಚುನಾವಣೆಗೆ ಇನ್ನೂ ಎಣಿಕೆಯೇ ಮುಗಿದಿರಲಿಲ್ಲ. ಆಗಲೇ ಶೇ 60ರಷ್ಟು ಗ್ರಾಪಂ ಗೆದ್ದಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ
ಮುಖ್ಯಮಂತ್ರಿಯಾಗಿ ಸುಳ್ಳು ಹೇಳಬಾರದು. ಇಡೀ ರಾಜ್ಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರೇ ಗೆದ್ದಿರೋದು ಹೆಚ್ಚು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಗೆದ್ದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾದಾಮಿಯಲ್ಲಿ ಗ್ರಾಮ ಪಂಚಾಯಿತಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದರು.ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತೇ. ಇದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷರಾದವರು ಪಂಚಾಯಿತಿ ಯಜಮಾನರಾಗಬೇಕು. ಪಿಡಿಒ ಹಿಂದೆ ಹೋಗ್ಬೇಡಿ. ಪಿಡಿಒ ನಿಮ್ಮ ಹಿಂದೆ ಇರಬೇಕು. ಮಹಿಳಾ ಸದಸ್ಯರ ಬದಲಿಗೆ ಗಂಡರು ದರ್ಬಾರ್ ಮಾಡೋಕೆ ಹೋಗ್ಬೇಡಿ ಎಂದು ಸಲಹೆ ನೀಡಿದರು.

ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಸರಿಯಾಗಿ ಅನುದಾನ ಬರುತ್ತಿಲ್ಲ. ನಾನು ಸುಳ್ಳು ಹೇಳ್ಳುತ್ತಿಲ್ಲ. ಗ್ರಾಮ ಪಂಚಾಯಿತಿಗೆ ಯಡಿಯೂರಪ್ಪ ದು ರೂಪಾಯಿ ಕೊಟ್ಟಿಲ್ಲ. ಅಕ್ಕಿ 7 ಕೆಜಿಯಿಂದ 5 ಕೆಜಿಗೆ ಇಳಿಸಿದ್ದಾರೆ‌‌. ಯಡಿಯೂರಪ್ಪ ಅವರಪ್ಪನ ಮನೆಯಿಂದ ಕೊಡುತ್ತಿದ್ದಾರಾ. ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 10 ಕೆಜಿ ಅಕ್ಕಿ ಕೊಡ್ತೀವಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಾಯಕವೇ ಕೈಲಾಸ ಎನ್ನುವುದರಲ್ಲಿ ಕಾಂಗ್ರೆಸ್ ನಂಬಿಕೆ ಇಟ್ಟುಕೊಂಡಿದೆ. ನಾನು ಜಾರಿ ಮಾಡಿದ ಯೋಜನೆ ನಿಲ್ಲಿಸಿದ್ದಾರೆ. ಇಂದಿರಾ ಕ್ಯಾಂಟಿನ್ ನಿಲ್ಲಿಸಲು ಹೊರಟಿದ್ದಾರೆ. ಮಕ್ಕಳಿಗೆ ಹಾಲು, ಶೂ, ಸಮವಸ್ತ್ರ ಕೊಟ್ಟಿದ್ದು ಬಿಜೆಪಿನಾ? ವಿದ್ಯಾಸಿರಿ,ಕೃಷಿ ಭಾಗ್ಯ ಈಗ ಇದ್ಯಾ? ಸಾಲಮನ್ನಾ ಮಾಡಿದ್ದು ಕಾಂಗ್ರೆಸ್. ಬಿಜೆಪಿ ಸರಕಾರ ಸಾಲಮನ್ನಾ ಮಾಡಿದ್ದು ತೋರಿಸಲಿ. ಬಿಜೆಪಿ ಸರಕಾರ ಮಾನ ಮರ್ಯಾದೆ ಇಲ್ಲದ, ಲಜ್ಜೆಗೆಟ್ಟವರು ಎಂದು ಟೀಕಿಸಿದರು.

ಅಸೆಂಬ್ಲಿಯಲ್ಲಿ ಪ್ರವಾಹದ ಬಗ್ಗೆ ಮೂರು ತಾಸು ಮಾತನಾಡಿದ್ದೇನೆ‌. ಲಜ್ಜೆಗೆಟ್ಟ ಸರಕಾರ. ವಿರೋಧ ಪಕ್ಷದ ನಾಯಕನಾಗಿ ಹೇಳಬಹುದು, ಏನು ಮಾಡೋಕೆ ಆಗುತ್ತೆ. ನಾನು ಮುಖ್ಯಮಂತ್ರಿ ಆಗಿದ್ದಾಗ 1800 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರ ಕೊಟ್ಟೇ. ಬಿಜೆಪಿ ಸರಕಾರದ ರೈತರಿಗೆ ಏನು ಮಾಡಿದೆ. ಹಸಿರು ಶಾಲು ಹಾಕಿ, ನಾನು ರೈತನ ಮಗ ಅಂತಾರೆ. ನಾವ್ಯಾರ ಮಕ್ಕಳು ಎಂದು ಸಿದ್ದರಾಮಯ್ಯ ಗುಡುಗಿದರು.

http://ರಾಜ್ಯದ ಬಿಜೆಪಿ ಸರ್ಕಾರದ ಅವ್ಯವಹಾರಗಳನ್ನು ಬಯಲಿಗೆಳೆಯಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಇಡೀ ವರ್ಷ ಹೋರಾಟ ನಡೆಸಲಾಗುವುದು : ಡಿ.ಕೆ.ಶಿವಕುಮಾರ್ -Vishwanews24

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago