ಚೆನ್ನೈ : ಮುಂದಿನ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಗುರಿಯಾಗಿದೆ ಎಂದು ತಮಿಳುನಾಡಿನ ನಿಯೋಜಿತ ರಾಜ್ಯಾಧ್ಯಕ್ಷ ಅಣ್ಣಾಮಲೈ ತಿಳಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಈಗಾಗಲೇ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ನೀಡಿದೆ. ಶುಕ್ರವಾರದಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮುನ್ನ ಕೊಯಮತ್ತೂರಿನಿಂದ ಚೆನ್ನೈಗೆ ಮೂರು ದಿನಗಳ ಸುದೀರ್ಘ ರಸ್ತೆ ಪ್ರಯಾಣ ಹಮ್ಮಿಕೊಂಡಿದ್ದಾರೆ.
ಬುಧವಾರ ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಬಿಜೆಪಿಯ ಹಲವು ಯೋಜನೆಗಳನ್ನು ಹಂಚಿಕೊಂಡಿದ್ದಾರೆ. “2026ರಲ್ಲಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಯ ಗುರಿಯಾಗಿದೆ. 2026ರಲ್ಲಿ ವಿಧಾನಸಭೆಗೆ 150 ಶಾಸಕರು ಪ್ರವೇಶಿಸಲಿದ್ದಾರೆ. ತಮಿಳುನಾಡಿನಲ್ಲೂ ಬಿಜೆಪಿ ಪಕ್ಷ ಅಧಿಕಾರ ನಡೆಸಬೇಕೆನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…