ಬೆಂಗಳೂರು: ಮುಂದಿನ ಚುನಾವಣೆಯಲ್ಲಾದರೂ ನಾಡಿನ ಜನತೆ ಐದು ವರ್ಷಗಳ ಕಾಲ ಜೆಡಿಎಸ್ ಪಕ್ಷಕ್ಕೆ ಆಡಳಿತ ನಡೆಸಲು ಸ್ವಂತ ಶಕ್ತಿ ಕೊಡಬೇಕು. ಬಹುಮತ ನೀಡಿದರೆ ದೇಶದಲ್ಲಿಯೇ ರಾಜ್ಯವನ್ನು ನಂಬರ್ ಒನ್ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಜೆಡಿಎಸ್ ಪಕ್ಷದ ಕಚೇರಿಗೆ ಬೀಗ ಹಾಕಿ ಕಟ್ಟಡವನ್ನು ನೆಲಸಮ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಕುರಿತಂತೆ ವಿರೋಧ ಪಕ್ಷಗಳು ಮಾಡುತ್ತಿರುವ ಎಲ್ಲಾ ಟೀಕೆಗೆ ಉತ್ತರ ಕೊಡಲು ಮುಂದಾಗಿದ್ದು ಫೆಬ್ರವರಿ 8ರಂದು ಮಂಡಿಸಲಿರುವ ಬಜೆಟ್ ನಲ್ಲಿ ಬ್ಯಾಂಕುಗಳಿಗೆ ಪಾವತಿಸಬೇಕಾದ ಸಾಲದ ಮೊತ್ತವನ್ನು ನಾಲ್ಕು ಕಂತುಗಳ ಬದಲಾಗಿ ಒಂದೇ ಕಂತಿನಲ್ಲಿ ಪಾವತಿಸುವ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಫೆ.8ರಂದು ಬಜೆಟ್ ಮಂಡನೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ. ಬಜೆಟ್ ಘೋಷಣೆ ವೇಳೆ ಸಾಲಮನ್ನಾ ಯೋಜನೆಯ ಸಂಪೂರ್ಣ ಮೊತ್ತ 46 ಸಾವಿರ ಕೋಟಿ ರು.ಗಳನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಚುಕ್ತಾ ಮಾಡುವ ಬಗ್ಗೆ ಪ್ರಕಟಿಸಲಾಗುವುದು. ರೈತರಲ್ಲಿ ಅವಿಶ್ವಾಸ ಮೂಡಿಸುವ ಪ್ರತಿಪಕ್ಷಗಳ ಹುನ್ನಾರಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು..
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…