ಬಂಟ್ವಾಳ: ಪ್ರಧಾನಿ ಮೋದಿ ಆಡಳಿದಿಂದ ದೇಶದಲ್ಲಿ ಭಯೋತ್ಪಾದನೆ ನಿಂತಿದೆ. ದೇಶದ ಯಾವ ಹಳ್ಳಿಯಲ್ಲೂ ಬಾಂಬ್ ಸಿಡಿದಿಲ್ಲ. ಬಿಜೆಪಿ ಆಡಳಿತದಲ್ಲಿ ನಕ್ಸಲ್ ಚಟುವಟಿಕೆಯೂ ಸಂಪೂರ್ಣ ನಿಂತು ಹೋಗಿದೆ. ಆಡಳಿತ, ರಾಜಕೀಯ, ಸಾಂಸ್ಕೃತಿಕವಾಗಿ ಹೀಗೆ ಮೂರು ರೀತಿಯಲ್ಲಿ ಮೋದಿ ದೇಶವನ್ನು ಪರಿವರ್ತನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಹೇಳಿದ್ದಾರೆ.
ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ 8ನೇ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರದಿಂದ ಹಮ್ಮಿಕೊಂಡಿದ್ದ ವಿಕಾಸ್ ತೀರ್ಥ ಬೈಕ್ ರ‍್ಯಾಲಿಯನ್ನು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ಭ್ರಷ್ಟಾಚಾರ, ಭಯೋತ್ಪಾದನೆ, ವಂಶಾಡಳಿತದ ಕೊಡುಗೆ ನೀಡಿದೆ. ರಷ್ಯಾ- ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಅಲ್ಲಿನ ಅಧ್ಯಕ್ಷರು-ಪ್ರಧಾನಿಯ ಬಳಿ ಮಾತನಾಡಿ 4 ಬಾರಿ ಯುದ್ಧ ನಿಲ್ಲಿಸಿ 22000 ಭಾರತೀಯ ವಿದ್ಯಾರ್ಥಿಗಳ ಜತೆಗೆ ಪಕ್ಕದ ರಾಷ್ಟ್ರದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ. ಅಯೋಧ್ಯೆ ಶ್ರೀರಾಮ ಮಂದಿರ, ಕಾಶಿಯಲ್ಲಿ ಶ್ರೀ ವಿಶ್ವನಾಥ ಸನ್ನಿಧಿ ಪುನರ್ ನಿರ್ಮಾಣ ಮೋದಿ ಕಾಲಘಟ್ಟದಲ್ಲಿ ನಡೆಯುತ್ತಿದೆ.
ಕಾಂಗ್ರೆಸ್‌ನ ಆಡಳಿತದಲ್ಲಿ ಹಗರಣಗಳೇ ತುಂಬಿದ್ದು, ಅದು ಭ್ರಷ್ಟಾಚಾರಿಗಳ ಕೂಟವಾಗಿದೆ. ಅದರ ರಾಷ್ಟ್ರೀಯ ಅಧ್ಯಕ್ಷರ ಜತೆಗೆ ಅವರ ಗಾಂಧಿ ಕುಟುಂಬ, ರಾಜ್ಯದ ಅಧ್ಯಕ್ಷ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಬೇಲ್‌ನಲ್ಲಿದ್ದಾರೆ. ಅರ್ಕಾವತಿ ಹಗರಣ ಹೊರಗೆ ಬಂದರೆ ಸಿದ್ಧರಾಮಯ್ಯ ಅವರು ಜೈಲಿಗೆ ಹೋಗುತ್ತಾರೆ. ಇಡೀ ರಾಜ್ಯದಲ್ಲಿ ಯುವ ಮೋರ್ಚಾವು ಸಂಘಟಿತ ಶಕ್ತಿಯಾಗಿ ಕೆಲಸ ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಯುವ ಮೋರ್ಚಾ ಪ್ರಭಾರಿ ಸತೀಶ್ ಕುಂಪಲ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಕುಮಾರಿ, ವಿಧಾನ ಮಂಡಲಗಳ ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ ಬೆಳಾಲು, ಭರತ್‌ರಾಜ್ ಕೃಷ್ಣಾಪುರ, ಸಚಿನ್‌ರಾಜ್ ರೈ, ಸಚಿನ್ ಮೋರೆ, ಸಚಿನ್ ಶೆಣೈ, ನವೀನ್, ಕೃಷ್ಣ ಎಂ.ಆರ್., ಅಶ್ವಥ್ ಪಣಪಿಲ ವೇದಿಕೆಯಲ್ಲಿದ್ದರು.
ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿ, ಮತ್ತೋರ್ವ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್
ಮಾರ್ನಾಡ್ ವಂದಿಸಿದರು. ಯತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…