ಕೊಪ್ಪಳ: ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿ ಇಡೀ ದೇಶ ಬಿಜೆಪಿ ಮಯವಾಗಲಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಜಿಲ್ಲೆಯ ಇರಕಲ್ಲಗಡಾ ಗ್ರಾಮದಲ್ಲಿ ಮಾತನಾಡಿದ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ, ಇದು ಪ್ರಧಾನಿ ಮೋದಿ ಅವರ ಜನಪ್ರಿಯತೆ ತೋರಿಸುತ್ತದೆ. ಬರುವ ದಿನದಲ್ಲಿ ಕರ್ನಾಟಕ ಸೇರಿ ಇಡೀ ದೇಶ ಬಿಜೆಪಿ ಮಯವಾಗಲಿದೆ. ಕಾಂಗ್ರೆಸ್ ದೆಹಲಿಯಲ್ಲಿ ಶೂನ್ಯವಾಗಿದೆ. ನಮ್ಮ ರಾಜ್ಯದಲ್ಲಿ ಗ್ಯಾರಂಟಿ ಸುಳ್ಳಿನ ಸರಮಾಲೆ ಮೇಲೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕ ಸೇರಿ ದೇಶದಲ್ಲಿ ಶೂನ್ಯವಾಗಲಿದೆ ಎಂದು ಹೇಳಿದರು.
ಇದೇ ವೇಳೆ ರಾಜ್ಯ ಬಿಜೆಪಿಯಲ್ಲಿ ಒಳಜಗಳ ವಿಚಾರವಾಗಿ ಮಾತನಾಡಿ, ಪಕ್ಷದ ಹಿರಿಯರು ಈಗಾಗಲೇ ಬೆಂಗಳೂರಿಗೆ ಬಂದಿದ್ದಾರೆ. ಎಲ್ಲಾ ವಿಚಾರಗಳು ಶೀಘ್ರದಲ್ಲಿಯೇ ಬಗೆಹರಿಯುತ್ತವೆ. ಪಕ್ಷದ ವರಿಷ್ಟರು ಒಳ್ಳೆಯ ತೀರ್ಮಾನ ಮಾಡುತ್ತಾರೆ. ದೆಹಲಿಯ ಚುನಾವಣೆ ಇದೀಗ ಮುಗಿದಿದೆ. ಕೆಲವೇ ದಿನದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಇನ್ನೂ ಅವಕಾಶ ಸಿಕ್ಕರೆ ನಾನು ರಾಜ್ಯಾದ್ಯಕ್ಷ ಆಗ್ತೇನೆ ಎನ್ನುವ ರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆಸೆ ಎಲ್ಲರಿಗೂ ಇರುತ್ತದೆ. ಆದರೆ ಪಕ್ಷದ ಹಿರಿಯರು ತೀರ್ಮಾನ ಮಾಡಬೇಕು. ಮುಡಾ ವಿಚಾರದಲ್ಲಿ ಇಡಿ ವಿಚಾರಣೆ ಇನ್ನೂ ನಡೆಯುತ್ತಿದೆ. ಹೀಗಾಗಿ ಈಗಾಗಲೇ ಅವರು ವಿಜಯೋತ್ಸವ ಆಚರಣೆ ಮಾಡುವ ಅವಶ್ಯಕತೆ ಇಲ್ಲ. ಇಡಿ ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಸಿದ್ದರಾಮಯ್ಯ ಒಬ್ಬರೇ ಜೈಲಿಗೆ ಹೋಗುತ್ತಾರೋ ಅಥವಾ ಎಷ್ಟು ಜನ ಹೋಗುತ್ತಾರೋ ಎನ್ನುವ ಕುರಿತು ಮುಂದಿನ ದಿನದಲ್ಲಿ ಗೊತ್ತಾಗಲಿದೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…