ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕಗೊಂಡಿದ್ದಾರೆ. ಸಮಿತಿ ಕಾರ್ಯಾಧ್ಯಕ್ಷರುಗಳಾಗಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ನೇಮಕಗೊಳಿಸಲಾಗಿದೆ. ಹಾಗೆಯೇ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.
ವಿಜಯೋತ್ಸವದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ ಅವರು, ರಾಷ್ಟ್ರೀಯ ಕಾಂಗ್ರೆಸ್, ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ನೂತನ ನಾಯಕರನ್ನು ಆಯ್ಕೆ ಮಾಡಿದೆ. ಹಾಗಾಗಿ, ರಾಜ್ಯಾದ್ಯಾಂತ ಕಾಂಗ್ರೆಸ್ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನು ಮತ್ತೆ ಹಿಡಿಯಲಿದೆ. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೆಯೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಡಿಕೆಶಿ ನೇತೃತ್ವದಲ್ಲಿ ಜಯಭೇರಿ ಬಾರಿಸಲಿದೆ. ಆ ಮೂಲಕ ಕರ್ನಾಟಕ ರಾಜ್ಯವನ್ನು ಬಿಜೆಪಿ ಮುಕ್ತ ರಾಜ್ಯವನ್ನಾಗಿ ಮಾಡಲು ಸಂಕಲ್ಪವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ, ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ, ಮನಪಾ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ಮಾಜಿ ಮೇಯರ್ ಮಹಾಬಲ ಮಾರ್ಲ, ಮನಪಾ ಸದಸ್ಯರಾದ ಎಸಿ ವಿನಯ್ ರಾಜ್ ಮತ್ತಿತ್ತರರು ಉಪಸ್ಥಿತರಿದ್ದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…