ಬೆಂಗಳೂರು: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಳೆಯಿಂದ ಉಂಟಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ಮುಖಂಡರಿಗೆ ಕರೆ ನೀಡಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ, ಕೋವಿಡ್ ನಿಂದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಆದರೂ ಸರ್ಕಾರದಿಂದ ಆರ್ಥಿಕ ಸಂಕಷ್ಟಕ್ಕೊಳಗಾದವರಿಗೆ ವಿಶೇಷ ಪರಿಹಾರ, ಕೋವಿಡ್ ನಿಂದ ಮೃತಪಟ್ಟವರಿಗೆ ಒಂದು ಲಕ್ಷ ಪರಿಹಾರ, ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಬಾಲಸೇವೆ ಯೋಜನೆ ತಂದಿದ್ದೇವೆ. ಕೇಂದ್ರದ ಸಹಕಾರದೊಂದಿಗೆ ಸರ್ಕಾರ ಕೋವಿಡ್ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದೆ ಎಂದರು.
ಹಂತ ಹಂತವಾಗಿ ಅನ್ ಲಾಕ್ ಮಾಡುವ ಮೂಲಕ ಜನ ಸಾಮಾನ್ಯರ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ ಲಸಿಕಾ ಉತ್ಸವ ಕೂಡ ಯಶಸ್ವಿಯಾಗಿದೆ. ಇದು ಕೂಡ ಒಂದು ಐತಿಹಾಸಿಕ ದಾಖಲೆಯಾಗಿದೆ. ಲಸಿಕೆಯಲ್ಲಿ ರಾಜ್ಯವೂ ರಾಷ್ಟ್ರದಲ್ಲಿ ಎರಡನೇ ಸ್ಥಾನದಲ್ಲಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖಂಡರು ಭಾಗವಹಿಸಿದ್ದರು. ದೆಹಲಿಯಿಂದ ವರ್ಚುವಲ್ ಮೂಲಕ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…