ಬೆಂಗಳೂರು: ರಾಜ್ಯದಲ್ಲಿ ಇಲ್ಲಿಯವರೆಗೂ ಒಂದು ರೀತಿಯ ರಾಜಕಾರಣ ನಡೆಯಿತು. ಇನ್ನು ಮುಂದಿನ ದಿನಗಳಲ್ಲಿ ನಿಜವಾದ ರಾಜಕಾರಣ ಆರಂಭವಾಗಲಿದೆ. ಪಕ್ಷದ ಯಾರೊಬ್ಬರೂ ನಿರುತ್ಸಾಹಿಗಳಾಗದೆ ಕೆಲಸ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಪಕ್ಷದ ಯುವ ಸಂಘಟನಾ ಸಭೆಯಲ್ಲಿ ಮಾತನಾಡಿದ ನಿಖಿಲ್, ಜೆಡಿಎಸ್ ಪಕ್ಷದ ಬಗ್ಗೆ ಹಲವು ರೀತಿಯ ಚರ್ಚೆಗಳಾಗುತ್ತಿವೆ. ಯಾವುದೇ ಕಾರಣಕ್ಕೂ ಪಕ್ಷವನ್ನ ವಿಲೀನ ಮಾಡುವ ಸಂದರ್ಭ ಬರುವುದಿಲ್ಲ. ಯಾವ ಪಕ್ಷದ ಜೊತೆಗೂ ನಮ್ಮ ಪಕ್ಷವನ್ನ ವಿಲೀನ ಮಾಡುವುದಿಲ್ಲ. ಇದನ್ನ ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ ಎಂದರು.
ಯಾರೂ ಉತ್ಸಾಹ ಕಳೆದುಕೊಳ್ಳಬೇಡಿ. ನಾವು ನಿಮ್ಮ ಜೊತೆ ಇದ್ದೇವೆ. ತಳಮಟ್ಟದಲ್ಲಿ ಪಕ್ಷ ಸಾಕಷ್ಟು ಸದೃಢವಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆಯೇ ಇದಕ್ಕೆ ಸಾಕ್ಷಿ ಎಂದು ನಿಖಿಲ್ ಹೇಳಿದರು.
ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಬರುವ ಚುನಾವಣೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತದೆ. ಮತ್ತೊಮ್ಮೆ ಕುಮಾರಣ್ಣ ಸಿಎಂ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಿ ಪಕ್ಷ ಸಂಘಟಿಸಬೇಕಾಗಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಮುಂಬರುವ ಚುನಾವಣೆಗಳಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದ ಅವರು, ಮತ್ತೊಮ್ಮೆ ಕುಮಾರಣ್ಣ ಸಿಎಂ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಿ ಪಕ್ಷ ಸಂಘಟಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಮಂಡ್ಯದಲ್ಲಿ ನಾನು ಸೋತ್ತಿದ್ರೂ ಅಲ್ಲಿನ ಜನರು ನಮ್ಮ ಕೈ ಬಿಟ್ಟಿಲ್ಲ ಇದಕ್ಕೆ ಉದಾಹರಣೆ ಅಲ್ಲಿನ ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಎಂದು ಹೇಳಿದರು.
JDS ನಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ, ಸೋಷಿಯಲ್ ಮೀಡಿಯಾದ ಪರಿಣಾಮಕಾರಿ ಬಳಕೆ ಬಗ್ಗೆ ಸಹ ಚರ್ಚೆ ಮಾಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…