ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ ಕಿತ್ತೆಸೆಯುತ್ತೇವೆ ಎಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋಲು ಅನುಭವಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
ಕಾಳಿಘಾಟ್ ನ ತಮ್ಮ ನಿವಾಸದಲ್ಲಿ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ದೆಹಲಿಯಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗುವುದು” ಎಂದು ಹೇಳಿದರು. ಇತ್ತೀಚೆಗೆ ನಡೆದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗೆದ್ದು 15 ವರ್ಷಗಳ ಟಿಎಂಸಿ ಆಳ್ವಿಕೆಯನ್ನು ಬಿಜೆಪಿ ಕೊನೆಗೊಳಿಸಿತ್ತು. ಟಿಎಂಸಿ ಕೇವಲ 80 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು.
ಚುನಾವಣಾ ಹಿನ್ನಡೆಯ ಹೊರತಾಗಿಯೂ ಪಕ್ಷ ಬಿಜೆಪಿ ವಿರುದ್ಧ ರಾಜಕೀಯ ಹೋರಾಟ ಮುಂದುವರಿಸುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನುಡಿದರು. “ಅವರು ಏನು ಬೇಕೋ ಮಾಡಲಿ; ನಮ್ಮ ಮನೆಯನ್ನು ಧ್ವಂಸಗೊಳಿಸಲಿ, ನೋಟಿಸ್ ನೀಡಲಿ.. ಇವುಗಳಿಗೆ ನಾನು ಮಣಿಯುವುದಿಲ್ಲ. ಏನೇ ಬರಲಿ, ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…