ಮಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಹಿನ್ನೆಲೆ ನಗರದ ಪಿವಿಎಸ್ ಕಚೇರಿ ಮುಂಭಾಗ ಗೋಪೂಜೆ ನಡೆಸಿ ಹರ್ಷ ವ್ಯಕ್ತಪಡಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಗೋಪೂಜೆ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್ ಕುಮಾರ್ ಕಟೀಲ್, ನಿರೀಕ್ಷೆಯಂತೆ ಗೋಹತ್ಯೆ ನಿಷೇಧ ಮಸೂದೆ ಜಾರಿಗೊಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧವೂ ಕಠಿಣ ಕಾನೂನು ಜಾರಿಗೆ ಬರಲಿದೆ. ಗೋಹತ್ಯೆ ನಿಷೇಧ ಮಂಡನೆ ವಿರುದ್ಧ ಕಾಂಗ್ರೆಸ್ ಬೆಂಬಲಿಸದಿರುವುದು ನಿರೀಕ್ಷಿತ. ವಿಧಾನಸಭೆಯಂತೆ ವಿಧಾನ ಪರಿಷತ್ ನಲ್ಲೂ ಮಸೂದೆ ಅಂಗೀಕಾರವಾಗಲಿದೆ.
ಈ ಹಿಂದೆ ಯಡಿಯೂರಪ್ಪನವರು ಜಾರಿಗೆ ತಂದ ಮಸೂದೆ ವಾಪಸ್ ಪಡೆಯುವಾಗ ಚರ್ಚಿಸದೇ ಹೋದ ಕಾಂಗ್ರೆಸ್ ಈಗ ಚರ್ಚೆ ನಡೆಸದೇ ಮಸೂದೆ ಮಂಡಿಸಲಾಗಿದೆ ಅನ್ನೋದರಲ್ಲಿ ಅರ್ಥವೇ ಇಲ್ಲ ಎಂದರು.ಅಲ್ಲದೇ ರೈತರ ಹೋರಾಟದ ಹಿಂದೆಯೂ ರಾಜಕೀಯವಿದ್ದು, ಅದನ್ನು ಮುನ್ನಡೆಸುವವರನ್ನು ನೋಡಿದ್ರೆ ಗೊತ್ತಾಗುತ್ತದೆ ಎಂದರು.
ಈ ಸಂದರ್ಭ ಕಾರ್ಪೊರೇಟರ್ ಸುಧೀರ್ ಶೆಟ್ಟಿ, ಮನೋಹರ್ ಕದ್ರಿ, ಶಶಿಕಲಾ ಕಾವ, ವೀಣಾ ಮಂಗಲ, ಸತೀಶ್ ಕುಂಪಲ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…