Featured

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ; ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ  – vishwanews24

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ; ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣಾಬ್ಬರ ಜೋರಾಗಿದ್ದು, ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಎಂಟತ್ತು ದಿನಗಳಿಂದ ಅಬ್ಬರಿಸುತ್ತಿರೋ ಮಳೆರಾಯ, ರಾಜ್ಯದಾದ್ಯಂತ ಮುಂದಿನ ನಾಲ್ಕೈದು ದಿನ ಮತ್ತಷ್ಟು ಅಬ್ಬರಿಸುವ ಸಾಧ್ಯತೆಯಿದೆ. ರಾಜ್ಯದ ಅನೇಕ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಕೂಡ ಇದ್ದು, ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ. ಜೊತೆಗೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇಂದಿನಿಂದ ಮೂರು ದಿನ ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಬಹುತೇಕ ಕಡೆ ಮಳೆ ಜೊತೆಗೆ ಬಿರುಗಾಳಿ ಸಹಿತ ಮಳೆ, ಗುಡುಗು ಮಿಂಚಿನ ಎಚ್ಚರಿಕೆ ಕೂಡ ನೀಡಲಾಗಿದೆ. ಬೆಂಗಳೂರಿನಲ್ಲೂ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದ್ದು, ಮುಂದಿನ ಒಂದು ವಾರ ನಗರದ ಹಲವೆಡೆ ಭಾರಿ ಮಳೆಯ ನಿರೀಕ್ಷೆ ಮಾಡಲಾಗಿದೆ. ಹಲವೆಡೆ ಭಾರೀ ಗುಡುಗು ಸಹಿತ ಮಳೆಯ ಅಬ್ಬರ ಎಚ್ಚರಿಕೆಯನ್ನ ಕೂಡ ಹವಾಮಾನ ಇಲಾಖೆ ನೀಡಿದೆ.

ಒಟ್ಟಾರೆ ಬೇಸಿಗೆ ಬೇಗೆಗೆ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಪೂರ್ವ ಮುಂಗಾರಿನ ಹಂಗಾಮ ಜೋರಾಗಿದ್ದು, ಮಳೆ ಕಾಣದೇ ಒಣಗಿದ್ದ ಭೂಮಿ ತಂಪಾಗುತ್ತಿದ್ದು, ರೈತಾಪಿ ವರ್ಗ ಕೂಡ ನಿಟ್ಟುಸಿರು ಬಿಟ್ಟಿದೆ.

Vishwa News 24

Recent Posts

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

11 minutes ago

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

19 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

19 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

20 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

20 hours ago