ದಾವಣಗೆರೆ:ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಭಾರತಕ್ಕೆ ಮುಂದಿನ ಪ್ರಧಾನಿಯಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದರು ಅಚ್ಚರಿ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ದಾವಣಗೆರೆ ಛಲವಾದಿ ಮಹಾಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರನ್ನು ಎದುರಿಸುವ ತಾಕತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದ್ದು, ರಾಹುಲ್ ಗಾಂಧಿಯಿಂದ ಮೋದಿಯನ್ನು ಎದುರಿಸಲು ಆಗುವುದಿಲ್ಲ. ಅದು ಕೇವಲ ಖರ್ಗೆಯ ಅವರಿಂದ ಮಾತ್ರ ಸಾಧ್ಯ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ತಾಕತ್ತು ರಾಹುಲ್ ಗಾಂಧಿಗೆ ಇಲ್ಲ. ಕಾಂಗ್ರೆಸ್ ಹಿರಿಯ ನಾಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ. ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಅಷ್ಟೇ ಅಲ್ಲ. ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ಮುಂದೆ ಅವರು ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮೊದಲ ದಲಿತ ಮುಖಂಡ , ದಿ. ಬಸವಲಿಂಗಪ್ಪ, ದಿವಂಗತ ಕೆ. ಎಚ್ , ರಂಗನಾಥ್, ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಇದ್ದರೂ ಅವರು ಮುಖ್ಯಮಂತ್ರಿ ಆಗಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಅಲ್ಲ, ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…