Featured

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ – vishwanews24

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು: ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಬುಧವಾರ ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಸರ್ಕಾರಿ ನೌಕರರ ತುಟ್ಟಿಭತ್ಯೆ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago